ಶಿರಾ: ನಗರದ ಗವಿ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ದರ್ಶನಕ್ಕೆ ಶನಿವಾರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿದ್ದರು.
ತುಮಕೂರಿನಿಂದ ಬಂದ ಯತ್ನಾಳ್ ಅವರನ್ನು ನಗರದ ಅಂಬೇಡ್ಕರ್ ವೃತ್ತದಿಂದ ಗವಿ ಆಂಜನೇಯಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು.
ಹಿಂದೂ ಮಹಾಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯದಲ್ಲಿ 2028ಕ್ಕೆ ಹಿಂದೂ ಪರ ಸರ್ಕಾರ ಅಧಿಕಾರಕ್ಕೆ ಬರಬೇಕು. ಎಲ್ಲ ಹಿಂದೂಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವರು ಮುಖ್ಯಮಂತ್ರಿಯಾಗಬೇಕು ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಅಂಜಿನಪ್ಪ, ಸುಧಾಕರ್ ಗೌಡ, ಸಂತೇಪೇಟೆ ನಟರಾಜು, ವಿಜಯರಾಜು, ಮಂಜುನಾಥ್, ಹೇಮಂತ್ ಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.