ADVERTISEMENT

ಹಿಂದೂ ಮಹಾಗಣಪತಿ ವಿಸರ್ಜನೆ: ಶಾಸಕರಾದ ಸುರೇಶ್‌ಗೌಡ,ಜ್ಯೋತಿಗಣೇಶ್ ಮಸ್ತ್ ಡ್ಯಾನ್ಸ್

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 13:01 IST
Last Updated 12 ಸೆಪ್ಟೆಂಬರ್ 2025, 13:01 IST
Prithvi
   Prithvi

ತುಮಕೂರು: ನಗರದಲ್ಲಿ ಶುಕ್ರವಾರ ನಡೆದ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್‌ ಕುಣಿದು ಕುಪ್ಪಳಿಸಿದರು.

ವಿಶ್ವ ಹಿಂದೂ ಪರಿಷತ್‌, ಬಜರಂಗ ದಳದಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಸಾವಿರಾರು ಜನ ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ವಾದ್ಯಗಳ ನಾದಕ್ಕೆ ಶಾಸಕರು ಹೆಜ್ಜೆ ಹಾಕಿದರು.

ಅವರಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್‌.ರವಿಶಂಕರ್‌, ಉಪಾಧ್ಯಕ್ಷ ವೈ.ಎಚ್‌.ಹುಚ್ಚಯ್ಯ ಸಾಥ್‌ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.