ADVERTISEMENT

ಪಾವಗಡ: ಗಣಪತಿ ಅದ್ದೂರಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2023, 15:58 IST
Last Updated 10 ಅಕ್ಟೋಬರ್ 2023, 15:58 IST
ಪಾವಗದಲ್ಲಿ ಸೋಮವಾರ ಗಣಪತಿ ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಮೆರವಣಿಗೆ ನಡೆಯಿತು
ಪಾವಗದಲ್ಲಿ ಸೋಮವಾರ ಗಣಪತಿ ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಮೆರವಣಿಗೆ ನಡೆಯಿತು   

ಪಾವಗಡ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೋಮವಾರ ಗಣಪತಿ ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಬಜರಂಗದಳ ವಾದ್ಯ ಗೋಷ್ಠಿಗಳೊಂದಿಗೆ ಮೆರವಣಿಗೆ ಆಯೋಜಿಸಿತ್ತು.

22 ದಿನಗಳ ಕಾಲ ಗಣಪತಿಗೆ ವಿಶೇಷ ಪೂಜೆ ನಡೆದಿತ್ತು. ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿತ್ತು. ಸೋಮವಾರ ವಾಸವಿ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಮುಖ್ಯ ರಸ್ತೆಗಳನ್ನು ಅಲಂಕರಿಸಲಾಗಿತ್ತು.

ಬಜರಂಗದಳದ ಜಿಲ್ಲಾ ಸಂಯೋಜಕ ಸುಮನ್, ತಾಲ್ಲೂಕು ಅಧ್ಯಕ್ಷ ಮಂಜುನಾಥ್ ವಾಸು, ನಗರ ಅಧ್ಯಕ್ಷ ಕಾರ್ತಿಕ್, ರಾಕೇಶ್, ಹರ್ಷ, ಕಾವಲಗೆರೆ ರಾಮಾಂಜಿ, ಅಲಕುಂದಿ ರಾಜ್, ರಘು, ಶೇಖರ್ ಬಾಬು, ಬಾಬು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.