ನಾರಾಯಣ ಗುರು
ತುಮಕೂರು: ಜಿಲ್ಲಾ ಆರ್ಯ ಈಡಿಗರ ಸಂಘದ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಮೇ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ರಾಮಕೃಷ್ಣ ನಗರದ ಆರ್ಯ ಈಡಿಗರ ಸಂಘದ ಆವರಣದಲ್ಲಿರುವ ಯೋಗ ಮಂದಿರದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಎಂ.ನಾಗರಾಜು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಇದೇ ವೇಳೆ ಸಮುದಾಯದ ಏಳಿಗೆಗೆ ಶ್ರಮಿಸಿದವರನ್ನು ಸನ್ಮಾನಿಸಲಾಗುತ್ತದೆ. ಸಂಘದ ಅಭಿವೃದ್ಧಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಪ್ರಮುಖ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಸಂಘದ ಸದಸ್ಯರು ಭಾಗವಹಿಸುವಂತೆ ಅಧ್ಯಕ್ಷ ಎಂ.ನಾಗರಾಜು, ಪ್ರಧಾನ ಕಾರ್ಯದರ್ಶಿ ಜೆ.ಪಿ.ಶಿವಣ್ಣ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.