ADVERTISEMENT

ಸಾಮಾನ್ಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2019, 15:37 IST
Last Updated 26 ಏಪ್ರಿಲ್ 2019, 15:37 IST

ತುಮಕೂರು: ಏಪ್ರಿಲ್ 29 ಮತ್ತು 30 ರಂದು ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದ್ದಾರೆ.

ತುಮಕೂರು ನಗರದ 13 ಹಾಗೂ ತಿಪಟೂರು ಮತ್ತು ಶಿರಾ ನಗರದಲ್ಲಿ ತಲಾ 2 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನಿಷೇಧಾಜ್ಞೆಯು ಏ.29 ಮತ್ತು 30ರಂದು ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಬೆರಳಚ್ಚು ಹಾಗೂ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಮುಚ್ಚಬೇಕು. ನಿಷೇಧಾಜ್ಞೆ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿರ್ಬಂಧವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT