ಕುಣಿಗಲ್: ಬಾಲಕಿಯನ್ನು ವಿವಾಹವಾಗಿ, ಆಕೆ ಆರು ತಿಂಗಳ ಗರ್ಭಿಣಿಯಾಗಲು ಕಾರಣನಾದ ಪತಿಯ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶ್ರೀನಿವಾಸ್ 17 ವರ್ಷದ ಬಾಲಕಿಯನ್ನು ವಿವಾಹವಾಗಿದ್ದು, ಆಕೆ ಗರ್ಭಿಣಿಯಾದ ನಂತರ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಷಯ ತಿಳಿದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮೇಲ್ವಿಚಾರಕಿ ಪದ್ಮಾವತಿ ಬಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.