ADVERTISEMENT

ಸ್ಥಳೀಯರಿಗೆ ಉದ್ಯೋಗ ನೀಡಿ

ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 7:27 IST
Last Updated 20 ಆಗಸ್ಟ್ 2020, 7:27 IST
ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಪಾವಗಡ ತಾಲ್ಲೂಕು ತಿರುಮಣಿ ಸೋಲಾರ್ ಘಟಕದ ಬಳಿ ರೈತರು, ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿದರು
ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಪಾವಗಡ ತಾಲ್ಲೂಕು ತಿರುಮಣಿ ಸೋಲಾರ್ ಘಟಕದ ಬಳಿ ರೈತರು, ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿದರು   

ಪಾವಗಡ: ತಾಲ್ಲೂಕಿನ ತಿರುಮಣಿ ಬಳಿಯ ಸೋಲಾರ್ ವಿದ್ಯುತ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯರು ಬುಧವಾರ ಧರಣಿ ನಡೆಸಿದರು.

ಘಟಕ ನಿರ್ಮಾಣಕ್ಕೆ ಸ್ಥಳೀಯ ರೈತರು ತಮ್ಮ ಜಮೀನುಗಳನ್ನು ಕಡಿಮೆ ಬೆಲೆಗೆ ಗುತ್ತಿಗೆ ನೀಡಿದ್ದಾರೆ. ಬಹಳಷ್ಟು ರೈತರು ವ್ಯವಸಾಯಕ್ಕೆ ಜಮೀನಿಲ್ಲದೆ ಇತರ ಉದ್ಯೋಗ ಅವಲಂಭಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಘಟಕದಲ್ಲಿರುವ ತಾಂತ್ರಿಕ, ಭದ್ರತಾ ಹುದ್ದೆಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಧರಣಿನಿರತರು ಆರೋಪಿಸಿದರು.

ಸ್ಥಳೀಯ ನಿರುದ್ಯೋಗಿ ಯುವಕರಿಗೆ ಕೆಲಸ ನೀಡುವ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಮನ್ನಣೆ ನೀಡಿಲ್ಲ. ಇಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಕಂಪನಿಯವರು ಸ್ಥಳೀಯರ ವಿರುದ್ಧ ದೌರ್ಜನ್ಯದಿಂದ ನಡೆದು
ಕೊಳ್ಳುತ್ತಿದ್ದಾರೆ. ಕಂಪನಿಗಳು ಸೂಕ್ತ ಕ್ರಮ ವಹಿಸದಿದ್ದರೆ ಹೋರಾಟ ತೀವ್ರ ಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಉದ್ಯೋಗ ಕಡಿತಗೊಳಿಸಬಾರದು, ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಮಲ್ಲಿಕಾರ್ಜುನ್, ಆಂಜನೇಯುಲು, ನಾಗಭೂಷಣ್, ಮಲ್ಲಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.