
ಪ್ರಜಾವಾಣಿ ವಾರ್ತೆ
ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚೆ ಗೇಟ್ ಬಳಿಯ ಜಗದಾಂಬ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ಬಂಗಾರದ ಆಭರಣ ದೋಚಿದ್ದಾರೆ.
ಭಾನುವಾರ ಮಧ್ಯಾಹ್ನ 3.30ರ ಸಮಯದಲ್ಲಿ ಮೂವರು ಅಂಗಡಿ ಒಳಗೆ ಪ್ರವೇಶಿಸಿದ್ದರು. ಅಲ್ಲಿನ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 70ರಿಂದ 80 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ತಾಲ್ಲೂಕಿನ ಮೇಕೆರಹಳ್ಳಿ ಅರಣ್ಯ ಪ್ರದೇಶದ ಬಳಿ ದರೋಡೆಗೆ ಬಳಸಿದ ಕಾರು ಪತ್ತೆಯಾಗಿದ್ದು, ಪೊಲೀಸರು ಅರಣ್ಯ ಭಾಗದಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಆರೋಪಿಗಳು ಬಿಟ್ಟು ಹೋದ ವಾಹನ ರಾಜಸ್ಥಾನದ ಕಡೆಯದ್ದು ಎಂಬುವುದು ಗೊತ್ತಾಗಿದೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.