ADVERTISEMENT

ತುರುವೇಕೆರೆ | ಸರ್ಕಾರಿ ಶಾಲೆ: ತಾತ್ಸಾರ ಬೇಡ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 6:02 IST
Last Updated 17 ನವೆಂಬರ್ 2025, 6:02 IST
ತುರುವೇಕೆರೆ ತಾಲ್ಲೂಕು ಆಡಳಿತದಿಂದ ನಡೆದ ಮಕ್ಕಳ ದಿನಾಚಣೆಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಮಕ್ಕಳನ್ನು ಸತ್ಕರಿಸಿದರು
ತುರುವೇಕೆರೆ ತಾಲ್ಲೂಕು ಆಡಳಿತದಿಂದ ನಡೆದ ಮಕ್ಕಳ ದಿನಾಚಣೆಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಮಕ್ಕಳನ್ನು ಸತ್ಕರಿಸಿದರು   

ತುರುವೇಕೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಪಟ್ಟಣದ ಜಿಜೆಸಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳೆಂದರೆ ಜನರಿಗೆ ತಾತ್ಸಾರ ಮನೋಭಾವ ಮೂಡಿದೆ. ಸರ್ಕಾರಿ ಶಾಲೆಗಳಲ್ಲಿ ಹಲವು ಸವಲತ್ತುಗಳಿವೆ. ನುರಿತ ಮತ್ತು ವಿದ್ಯಾವಂತ ಶಿಕ್ಷಕರು ಇದ್ದಾರೆ. ಆದರೂ ಜನರಿಗೆ ಸರ್ಕಾರಿ ಶಾಲೆಗಳು ಬೇಡವಾಗಿದೆ. ಇದಕ್ಕೆ ಕಾರಣವೇನು ಎನ್ನುವುದನ್ನು ಅರಿಯಬೇಕು. ಉದಾಸೀನತೆಗೆ ಇರುವ ಕಾರಣವನ್ನು ಹುಡುಕಲು ಪೋಷಕರು, ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

ADVERTISEMENT

ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅನಂತರಾಮು, ಬಿ.ಆರ್.ಸಿ.ಸುರೇಶ್‌, ಉಪ ಪ್ರಾಂಶುಪಾಲ ವೆಂಕಟೇಶ್‌, ಶಿಕ್ಷಣ ಇಲಾಖೆ ಅಧಿಕಾರಿಗಳಾದ ನಳಿನಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ, ಬಿ.ಆರ್.ಪಿ ಕೆ.ಆರ್.ಸುರೇಶ್‌, ಎಸ್‌ಡಿಎಂಸಿ ಅಧ್ಯಕ್ಷ ದೇವರಾಜು, ಮುನಿಯೂರು ರಂಗಸ್ವಾಮಿ, ನಂಜೇಗೌಡ, ಗುರುಮೂರ್ತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.