ADVERTISEMENT

ತುರುವೇಕೆರೆ: 87 ಕೊಠಡಿ ನಿರ್ಮಾಣಕ್ಕೆ ಅನುದಾನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 3:10 IST
Last Updated 6 ಸೆಪ್ಟೆಂಬರ್ 2020, 3:10 IST
ತುರುವೇಕೆರೆಯ ಜೆ.ಪಿ. ಕಾನ್ವೆಂಟ್ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಶಾಸಕ ಮಸಾಲ ಜಯರಾಂ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ ಸನ್ಮಾನಿಸಿದರು
ತುರುವೇಕೆರೆಯ ಜೆ.ಪಿ. ಕಾನ್ವೆಂಟ್ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಶಾಸಕ ಮಸಾಲ ಜಯರಾಂ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ ಸನ್ಮಾನಿಸಿದರು   

ತುರುವೇಕೆರೆ: ತಾಲ್ಲೂಕಿನ 40ಕ್ಕೂ ಹೆಚ್ಚು ಶಾಲೆಗಳ 87 ಕೊಠಡಿ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಂದಿದೆ ಎಂದು ಶಾಸಕ ಮಸಾಲ ಜಯರಾಂ ಹೇಳಿದರು.

ಪಟ್ಟಣದ ಜೆ.ಪಿ. ಕಾನ್ವೆಂಟ್ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವೈದ್ಯರು, ವಿಜ್ಞಾನಿಗಳು, ರಾಜಕಾರಣಿಗಳು, ತಂತ್ರಜ್ಞರು, ಕ್ರೀಡಾಪಟುಗಳು, ವಕೀಲರು ಹೀಗೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಗಮನಾರ್ಹ ಎಂದರು.

ADVERTISEMENT

ತುಮುಲ್ ಅಧ್ಯಕ್ಷ ಸಿ.ವಿ.ಮಹಾಲಿಂಗಯ್ಯ ಮಾತನಾಡಿ, ‘ಕೋವಿಡ್-19 ಸೃಷ್ಟಿಸಿದ ಬಿಕ್ಕಟ್ಟು ಶೈಕ್ಷಣಿಕ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಆನ್ಲೈನ್ ಶಿಕ್ಷಣ ವ್ಯವಸ್ಥೆ ಮಕ್ಕಳ ಕಲಿಕೆಗೆ ಸಮರ್ಪಕವಾಗಿಲ್ಲ. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದರು.

ವಿವಿಧ ಕ್ಷೇತ್ರಗಳ ಸಾಧಕ ಶಿಕ್ಷಕರಾದ ಎ.ಆರ್.ಲತಾ, ಗಂಗಮ್ಮ ಮತ್ತು ಮಹಾಲಿಂಗಪ್ಪ ಅವರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾದಿಕಾರಿ ಸಿ.ರಂಗಧಾಮಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಸದಸ್ಯ ನಂಜೇಗೌಡ, ಪ.ಪಂ ಸದಸ್ಯ ಚಿದಾನಂದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಂರಾಜುಮುನಿಯೂರು, ಇ.ಒ. ಜಯಕುಮಾರ್, ಬಿಆರ್.ಸಿ. ವಸಂತ್‌ಕುಮಾರ್, ಬೋರಪ್ಪ, ಪರಮೇಶ್, ಮುಖಂಡ ಕೊಂಡಜ್ಜಿವಿಶ್ವನಾಥ್, ರಮೇಶ್‌ಗೌಡ, ಸುರೇಶ್ ಪಾಲೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.