
ಚಿಕ್ಕನಾಯಕನಹಳ್ಳಿ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್‌ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಾಸಕ ಸಿ.ಬಿ. ಸುರೇಶ್ ಬಾಬು ಉದ್ಟಾಟಿಸಿದರು.
ನಂತರ ಮಾತನಾಡಿದ ಶಾಸಕ, ಕೇವಲ ಪಠ್ಯಕ್ಕೆ ಸೀಮಿತವಾಗಿರದೆ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ. ಕಳೆದ ವರ್ಷ ಸರ್ಕಾರದಿಂದ ಯಾವುದೇ ಅನುದಾನ ಬಾರದ ಕಾರಣ ಕಾಲೇಜಿನ ಕಾಂಪೌಂಡ್, ಸೈಕಲ್ ಸ್ಟಾಂಡ್, ಕಂಪ್ಯೂಟರ್‌ಗಳನ್ನು ನೀಡಿಲ್ಲ. ಅದರೆ ಈ ವರ್ಷ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಾನಪದ ವಿವಿ ಸಿಂಡಿಕೇಟ್ ಸದಸ್ಯ, ವೇದ ಸಿನಿಮಾದ ಹಿನ್ನೆಲೆ ಗಾಯಕ ಮೋಹನ್‌ಕುಮಾರ್ ಎನ್. ಜುಂಜಪ್ಪನ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.
ಪ್ರಾಂಶುಪಾಲೆ ಜ್ಯೋತಿ ಎಂ.ಜಿ., ಪ್ರಸನ್ನಕುಮಾರ್, ದೈಹಿಕ ಶಿಕ್ಷಕರಾದ ಶೈಲೇಂದ್ರ ಕುಮಾರ್, ಪ್ರಾಧ್ಯಾಪಕರು, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.