ಮಧುಗಿರಿ: ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯಿಂದ ಸೆ. 15ರಂದು ಮಧ್ಯಾಹ್ನ 12ಗಂಟೆಯಿಂದ 2 ರವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ. ಜನರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಇಒ ಡಿ. ದೊಡ್ಡಸಿದ್ದಯ್ಯ ತಿಳಿಸಿದ್ದಾರೆ.
ತಾಲ್ಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಪುರಸಭೆ , ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.