ADVERTISEMENT

ತುಮಕೂರು | 4 ಕಡೆ ಶೇಂಗಾ ಖರೀದಿ ಕೇಂದ್ರ

ಶಿರಾ, ಪಾವಗಡ, ಮಧುಗಿರಿ, ತುಮಕೂರು ಕೇಂದ್ರಗಳು

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2024, 4:27 IST
Last Updated 31 ಅಕ್ಟೋಬರ್ 2024, 4:27 IST
ಶೇಂಗಾ ರಾಶಿ (ಸಾಂದರ್ಭಿಕ ಚಿತ್ರ)
ಶೇಂಗಾ ರಾಶಿ (ಸಾಂದರ್ಭಿಕ ಚಿತ್ರ)   

ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಶಿರಾ, ಪಾವಗಡ, ಮಧುಗಿರಿ, ತುಮಕೂರು ಎಪಿಎಂಸಿ ಆವರಣದಲ್ಲಿ ಶೇಂಗಾ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಪ್ರತಿ ಕ್ವಿಂಟಲ್ ಶೇಂಗಾಕ್ಕೆ ₹6,783 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಒಬ್ಬ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಲ್‍ನಂತೆ ಗರಿಷ್ಠ 15 ಕ್ವಿಂಟಲ್ ಖರೀದಿಸಲಾಗುತ್ತದೆ.

ಶೇಂಗಾ ಖರೀದಿ ಕೇಂದ್ರಗಳಲ್ಲಿ ನ. 4ರಿಂದ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ರೈತರಿಂದ ಶೇಂಗಾ ಖರೀದಿಸುವ ಪೂರ್ವದಲ್ಲಿ ‘ಫ್ರೂಟ್’ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಾಯಿಸಿದ ನಂತರ 90 ದಿನಗಳ ವರೆಗೆ ಖರೀದಿ ಮಾಡಬೇಕು. ರೈತರು ನೋಂದಾಯಿಸಲು 45 ದಿನಗಳ ಕಾಲಾವಕಾಶ ನೀಡಲಾಗಿದೆ.

ADVERTISEMENT

ಶೇಂಗಾ ಖರೀದಿಗಾಗಿ ನಫೆಡ್ ಮತ್ತು ಕೆಒಎಫ್ ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಶೇಂಗಾ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಮಾತ್ರ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ.

ಯಾವುದೇ ಗದ್ದಲ, ಸಮಸ್ಯೆಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಗೆ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ನಿರ್ದೇಶಿಸಿದರು.

ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕ ಬಿ.ರಾಜಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.