ADVERTISEMENT

ಗುಬ್ಬಿ ಚನ್ನಬಸವೇಶ್ವರ ಜಾತ್ರೆಗೆ ತೆರೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 4:37 IST
Last Updated 8 ಏಪ್ರಿಲ್ 2024, 4:37 IST
ಗುಬ್ಬಿ ಚನ್ನಬಸವೇಶ್ವರ ಸ್ವಾಮಿಗೆ ತಾವರೆ ಹೂವಿನ ಅಲಂಕಾರ ಮಾಡಲಾಗಿತ್ತು
ಗುಬ್ಬಿ ಚನ್ನಬಸವೇಶ್ವರ ಸ್ವಾಮಿಗೆ ತಾವರೆ ಹೂವಿನ ಅಲಂಕಾರ ಮಾಡಲಾಗಿತ್ತು   

ಗುಬ್ಬಿ: ಪಟ್ಟಣದ ಚನ್ನಬಸವೇಶ್ವರ ಜಾತ್ರೆಯ ಕೊನೆಯ ದಿನವಾದ ಭಾನುವಾರ ದೇವರನ್ನು ಪಲ್ಲಕ್ಕಿಯಲ್ಲಿ ಹೊತ್ತು ಪಟ್ಟಣದ ಹೊರವಲಯದ ಚನ್ನಶೆಟ್ಟಿಹಳ್ಳಿ ಗದ್ದುಗೆಗೆ ನಡೆ ಮಡಿಯೊಂದಿಗೆ ಕರೆದೊಯ್ಯಲಾಯಿತು.

ಗದ್ದುಗೆಯಲ್ಲಿ ಮೂರ್ತಿಗೆ ಗಂಗಾಭಿಷೇಕ, ಕ್ಷೀರಾಭಿಷೇಕ, ಎಳನೀರು, ಗಂಧ, ಪಂಚಾಮೃತ, ರುದ್ರಾಭಿಷೇಕ ಹಾಗೂ ಬಿಲ್ವಾರ್ಚನೆ ಮಾಡಿ ಮೂರ್ತಿಯನ್ನು ತಾವರೆ ಹೂವುಗಳಿಂದ ಅಲಂಕರಿಸಲಾಗಿತ್ತು. ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.

ಗದ್ದುಗೆಯಲ್ಲಿ ಪೂಜೆ ಸಲ್ಲಿಸಿದ ನಂತರ ಪುಷ್ಪಾಲಂಕೃತ ಪಲ್ಲಕ್ಕಿ ಹೊತ್ತು ಚೆನ್ನಶೆಟ್ಟಿಹಳ್ಳಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.

ADVERTISEMENT

ಮೆರವಣಿಗೆ ನಂತರ ದೇವಾಲಯದಲ್ಲಿ ಗುಡಿ ತುಂಬಿಸುವುದರೊಂದಿಗೆ ಜಾತ್ರೆಗೆ ತೆರ ಎಳೆಯಲಾಯಿತು.

ಫೋಟೋ 02ಸುದ್ದಿ01ಗುಬ್ಬಿ: ಚನ್ನಬಸವೇಶ್ವರ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಪಲ್ಲಕ್ಕಿಯಲ್ಲಿ ಕೂರಿಸಿರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.