ಗುಬ್ಬಿ: ತಾಲ್ಲೂಕಿನ ಎನ್.ನಂದಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಬಾಲಕ ಅಶ್ವಥ್ ಮೇಲೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ.
ಗ್ರಾಮದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಹತ್ತಕ್ಕೂ ಹೆಚ್ಚು ನಾಯಿಗಳು ಒಮ್ಮೆಲೇ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ. ಬಾಲಕನ ಚೀರಾಟ ಕೇಳಿ ಓಡಿಬಂದ ಗ್ರಾಮಸ್ಥರು ಬಾಲಕನನ್ನು ನಾಯಿಗಳಿಂದ ರಕ್ಷಿಸಿದ್ದಾರೆ.
ಗ್ರಾಮ ಹಾಗೂ ಸುತ್ತಮುತ್ತ ನಾಯಿಗಳು ಹೆಚ್ಚುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಸಂಬಂಧಿಸಿದವರು ಸೂಕ್ತಕ್ರಮ ಕೈಗೊಂಡು ನಾಯಿಗಳ ಹಾವಳಿ ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.