ADVERTISEMENT

ಗುಬ್ಬಿ | ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 6:47 IST
Last Updated 5 ಜೂನ್ 2024, 6:47 IST
ಗುಬ್ಬಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ವಿಜಯೋತ್ಸವ ಆಚರಿಸಿದರು
ಗುಬ್ಬಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ವಿಜಯೋತ್ಸವ ಆಚರಿಸಿದರು   

ಗುಬ್ಬಿ: ಎನ್‌ಡಿಎ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ತಾಲ್ಲೂಕಿನಾದ್ಯಂತ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಗೂಡಿ ಚುನಾವಣೆ ಎದುರಿಸಿದ್ದರಿಂದ ಅಭ್ಯರ್ಥಿ ವಿ. ಸೋಮಣ್ಣ ತಾಲ್ಲೂಕಿನಲ್ಲಿ ನಿರೀಕ್ಷೆ ಮೀರಿ 26 ಸಾವಿರಕ್ಕಿಂತಲೂ ಅಧಿಕ ಮತ ಪಡೆದು ಗೆಲುವು ಸಾಧಿಸಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದೆ.

ನಿರೀಕ್ಷೆ ಮೀರಿ ಮೈತ್ರಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಿದ್ದರಿಂದ ಗೆಲುವಿನ ಹಾದಿ ಸುಗಮವಾಗಿದೆ.

ADVERTISEMENT

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಂಚಾಕ್ಷರಿ, ಮುಖಂಡರಾದ ಎಸ್‌.ಡಿ. ದಿಲೀಪ್ ಕುಮಾರ್, ಬಿ.ಎಸ್. ನಾಗರಾಜು, ಲೋಕೇಶ್, ಸುರೇಶ್ ಗೌಡ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಣ್ಣಪ್ಪಸ್ವಾಮಿ, ಶಿವಕುಮಾರ್, ಕೃಷ್ಣಮೂರ್ತಿ ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.