ADVERTISEMENT

ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸಿದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2025, 0:47 IST
Last Updated 7 ಅಕ್ಟೋಬರ್ 2025, 0:47 IST
ಗುಬ್ಬಿ ತಾಲ್ಲೂಕಿನ ಸಿ.ಎಸ್ ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಡ ವಿದ್ಯಾರ್ಥಿಗಳ ಶುಲ್ಕವನ್ನು ಗ್ರಾಮಸ್ಥರು ಪಾವತಿಸಿದರು 
ಗುಬ್ಬಿ ತಾಲ್ಲೂಕಿನ ಸಿ.ಎಸ್ ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಡ ವಿದ್ಯಾರ್ಥಿಗಳ ಶುಲ್ಕವನ್ನು ಗ್ರಾಮಸ್ಥರು ಪಾವತಿಸಿದರು    

ಗುಬ್ಬಿ: ತಾಲ್ಲೂಕಿನ ಸಿಎಸ್ ಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಮಾರು 36 ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕವನ್ನು ಗ್ರಾಮಸ್ಥರು ಪಾವತಿಸಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ಕಾಲೇಜು ಬಿಡುವ ಹಂತದಲ್ಲಿ ಇದ್ದರು. ಇದನ್ನು ಅರಿತ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಮಾನ ಮನಸ್ಕರು ಸೇರಿಕೊಂಡು ಸುಮಾರು ₹1.20 ಲಕ್ಷ ಶುಲ್ಕವನ್ನು ಕಾಲೇಜಿಗೆ ಪಾವತಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಲೇಜು ಶುಲ್ಕವನ್ನು ಪಾವತಿಸಿದ್ದೇವೆ. ವಿದ್ಯಾರ್ಥಿಗಳು ಪೋಷಕರ ಸ್ಥಿತಿಯನ್ನು ಅರಿತು ಓದಿನತ್ತ ಗಮನಹರಿಸಬೇಕು. ವಿದ್ಯಾರ್ಥಿಗಳು ಕಾಲಹರಣ ಮಾಡದೆ ಪ್ರಾಧ್ಯಾಪಕರ ಸಲಹೆ ಸೂಚನೆಗಳನ್ನು ಪಾಲಿಸುತ್ತಾ ಓದಿನತ್ತ ಗಮನಹರಿಸಬೇಕು. ಇಂದಿನ ಶ್ರಮವು ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಡುವುದು ಎನ್ನುವುದನ್ನು ವಿದ್ಯಾರ್ಥಿಗಳು ಅರಿತು ನಡೆಯಬೇಕಿದೆ ಎಂದು ಗ್ರಾಮಸ್ಥರು ತಿಳಿಸಿದರು.

ADVERTISEMENT

ಗ್ರಾಮಸ್ಥರು ಶುಲ್ಕ ಪಾವತಿಸುವ ಮೂಲಕ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿರುವುದು ಉತ್ತಮ ಬೆಳವಣಿಗೆ. ಸ್ಥಳೀಯರು ಸಹಕಾರ ನೀಡಿದಲ್ಲಿ ಗ್ರಾಮದಲ್ಲಿರುವ ಕಾಲೇಜನ್ನು ಅಭಿವೃದ್ಧಿಪಡಿಸಲು ಸಾಧ್ಯ ಎಂದು ಪ್ರಾಂಶುಪಾಲ ಪುಟ್ಟರಾಜು ತಿಳಿಸಿದರು.

ಸಿಡಿಸಿ ಸದಸ್ಯ ನಂಜೇಗೌಡ, ಲಕ್ಷ್ಮಿನರಸೇಗೌಡ, ಸುಶಾಂತ್, ನರಸೇಗೌಡ, ಯೋಗೇಶ್, ರಮೇಶ್, ಲಕ್ಷ್ಮಿ, ರವಿ, ತಿಮ್ಮೇಗೌಡ, ನರಸಿಂಹಮೂರ್ತಿ, ಕಾಲೇಜು ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.