ADVERTISEMENT

ತುಮಕೂರು: ಜ.5ಕ್ಕೆ ಸಿಎಂ ಮನೆ ಮುಂದೆ ‘ಅತಿಥಿ’ಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 7:36 IST
Last Updated 24 ಡಿಸೆಂಬರ್ 2025, 7:36 IST
   

ತುಮಕೂರು: ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದಿಂದ ಜ. 6ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

‘ಸರ್ಕಾರ ಕೋರ್ಟ್‌ಗೆ ನೀಡಿದ ಮೌಖಿಕ ಭರವಸೆ ಹುಸಿಗೊಳಿಸಿದೆ. 20 ವರ್ಷಗಳ ಸೇವೆ ಪರಿಗಣಿಸದೆ, ಅನರ್ಹ ಎಂಬ ಹಣೆಪಟ್ಟಿ ಕಟ್ಟಿ ಸುಮಾರು 6 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಎರಡು ದಶಕಗಳಿಂದ ಸೇವೆ ಪಡೆದು, ಈಗ ಕೆಲಸದಿಂದ ತೆಗೆಯಲಾಗಿದೆ’ ಎಂದು ಸಂಘದ ಅಧ್ಯಕ್ಷ ಪಿ.ಸಿ.ಲೋಕೇಶ್‌ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅತಿಥಿ ಉಪನ್ಯಾಸಕ ಮಂಜುನಾಥ್‌ ಜೋಗಿ, ‘ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಸತತ 10 ವರ್ಷ ಕಾರ್ಯ ನಿರ್ವಹಿಸಿದ ಉಪನ್ಯಾಸಕರನ್ನು ಕಾಯಂ ಮಾಡಬೇಕು ಎಂಬ ಆದೇಶ ಪಾಲಿಸುತ್ತಿಲ್ಲ’ ಎಂದು ದೂರಿದರು.

ADVERTISEMENT

ಸಂಘದ ಪದಾಧಿಕಾರಿಗಳಾದ ಎಸ್‌.ಮನೋಹರ್, ರಂಗಸ್ವಾಮಿ ಗೋಷ್ಠಿಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.