ADVERTISEMENT

ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 3:59 IST
Last Updated 24 ಸೆಪ್ಟೆಂಬರ್ 2024, 3:59 IST
ಪಾವಗಡ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಡಿ.ಎನ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು
ಪಾವಗಡ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಡಿ.ಎನ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು    

ಪಾವಗಡ: ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಸೋಮವಾರ ತಹಶೀಲ್ದಾರ್ ಡಿ.ಎನ್.ವರದರಾಜು ಅವರಿಗೆ ಮನವಿ ಸಲ್ಲಿಸಿದರು.

ಶ್ರಮದಾಯಕ ಕೆಲಸ ನಿರ್ವಹಿಸುವ ಹಮಾಲಿಗಳ ಬದುಕು ಸುಧಾರಿಸಬೇಕಿದೆ. ಕೊನೆಗಾಲದಲ್ಲಿ ಅನಾರೋಗ್ಯದಿಂದ ಸಂಕಷ್ಟಕ್ಕೀಡಾಗುವ ಹಮಾಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ಕಾರ್ಮಿಕರು ಮನವಿ ಮಾಡಿದರು.

ಕಾರ್ಮಿಕರ ಭವಿಷ್ಯನಿಧಿ,ಪಿಂಚಣಿ, ವಸತಿ ಯೋಜನೆ ಜಾರಿ ಮಾಡುವುದು ಅಗತ್ಯವಾಗಿದೆ. ಸಹಜ ಮರಣಕ್ಕೂ ₹1ಲಕ್ಷ ಪರಿಹಾರ ನೀಡಬೇಕು. ಶವ ಸಂಸ್ಕಾರ ಪರಿಹಾರ ಮೊತ್ತವನ್ನು ₹25ಸಾವಿರಕ್ಕೆ ಹೆಚ್ಚಿಸಬೇಕು. ಭವಿಷ್ಯನಿಧಿ ಯೋಜನೆ ಸೂಕ್ತ ಪಿಂಚಣಿ ಯೋಜನೆ ಜಾರಿಮಾಡಬೇಕು. ನಿವೃತ್ತಿ ಸಂಚಾರ ಮೊತ್ತ ನೀಡಬೇಕು. ಮರಣ ಪರಿಹಾರ ₹2ಲಕ್ಷಕ್ಕೆ ಹೆಚ್ಚಿಸಬೇಕು. ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ಕಾರ್ಮಿಕ ಕಾನೂನು ಜಾರಿಯಾಗುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಎಪಿಎಂಸಿ ಹಮಾಲಿ ಸಂಘದ ಕಾರ್ಯದರ್ಶಿ ಒ.ನಾಗರಾಜು, ಬಸ್ ನಿಲ್ದಾಣ ಹಮಾಲಿ ಸಂಘದ ಕಾರ್ಯದರ್ಶಿ ಮದ್ಲೇಟಪ್ಪ, ನಾಗರಾಜು, ಗಂಗಾಧರ್, ರಾಮಾಂಜಿನಪ್ಪ, ರಾಜು, ಹನುಮಂತರಾಯ, ರಮೇಶ್ ರಸೂಲ್ ಸಾಬ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.