ADVERTISEMENT

ಆರೋಗ್ಯ, ವಿದ್ಯೆ ದುಬಾರಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 4:10 IST
Last Updated 26 ಜುಲೈ 2025, 4:10 IST
<div class="paragraphs"><p>ತುಮಕೂರಿನಲ್ಲಿ ಶುಕ್ರವಾರ ವೀರಶೈವ ಸಮಾಜ ಸೇವಾ ಸಮಿತಿ, ವೀರಶೈವ ಸಹಕಾರ ಬ್ಯಾಂಕ್, ವೀರಶೈವ ಉಚಿತ ವೈದ್ಯಕೀಯ ಸೇವಾ ಕೇಂದ್ರ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನೇತ್ರ ಪರೀಕ್ಷೆ, ಶಸ್ತ್ರಚಿಕಿತ್ಸಾ ಶಿಬಿರವನ್ನು ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. </p></div>

ತುಮಕೂರಿನಲ್ಲಿ ಶುಕ್ರವಾರ ವೀರಶೈವ ಸಮಾಜ ಸೇವಾ ಸಮಿತಿ, ವೀರಶೈವ ಸಹಕಾರ ಬ್ಯಾಂಕ್, ವೀರಶೈವ ಉಚಿತ ವೈದ್ಯಕೀಯ ಸೇವಾ ಕೇಂದ್ರ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನೇತ್ರ ಪರೀಕ್ಷೆ, ಶಸ್ತ್ರಚಿಕಿತ್ಸಾ ಶಿಬಿರವನ್ನು ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.

   

ತುಮಕೂರು: ಪ್ರಸ್ತುತ ಕಾಲಘಟ್ಟದಲ್ಲಿ ಮನುಷ್ಯನಿಗೆ ಅತ್ಯಗತ್ಯವಿರುವ ಆರೋಗ್ಯ, ವಿದ್ಯೆ ದುಬಾರಿಯಾಗಿದೆ ಎಂದು ಹಿರೇಮಠ ಅಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇಲ್ಲಿ ಶುಕ್ರವಾರ ಆತಂಕ ವ್ಯಕ್ತಪಡಿಸಿದರು.

ನಗರ ವೀರಶೈವ ಸಮಾಜ ಸೇವಾ ಸಮಿತಿ, ವೀರಶೈವ ಸಹಕಾರ ಬ್ಯಾಂಕ್, ವೀರಶೈವ ಉಚಿತ ವೈದ್ಯಕೀಯ ಸೇವಾ ಕೇಂದ್ರ, ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ, ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ಉಚಿತವಾಗಿ ನೇತ್ರ ತಪಾಸಣೆ ಹಾಗೂ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಈಗ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಾಗಿದೆ. ದೇಹಕ್ಕೆ ವಯಸ್ಸಾದಂತೆ ಕಣ್ಣುಗಳಿಗೂ ವಯಸ್ಸಾಗಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಸಕಾಲದಲ್ಲಿ ಕಣ್ಣುಗಳ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ, ಶಸ್ತ್ರಚಿಕಿತ್ಸೆ ಮೂಲಕ ದೃಷ್ಟಿದೋಷ ನಿವಾರಣೆ ಮಾಡಿಕೊಳ್ಳಬಹುದು ಎಂದು ಹೇಳಿದರು.

ಸಂಪತ್ತು ದಾನ ಮಾಡುವಂತೆ ಮರಣದ ನಂತರ ನೇತ್ರ ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗಬೇಕು ಎಂದು ಸಲಹೆ ಮಾಡಿದರು.

ವೀರಶೈವ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಜೆ.ರುದ್ರಪ್ಪ, ಉಪಾಧ್ಯಕ್ಷ ಕೆ.ಮಲ್ಲಿಕಾರ್ಜುನಯ್ಯ, ಉಚಿತ ವೈದ್ಯಕೀಯ ಸೇವಾ ಕೇಂದ್ರದ ಅಧ್ಯಕ್ಷ ಅರ್ಜುನ್, ಉಪಾಧ್ಯಕ್ಷ ಟಿ.ಜೆ.ಗಿರೀಶ್, ಕಾರ್ಯದರ್ಶಿ ರವಿಶಂಕರ್, ವೀರಶೈವ ಸಮಾಜ ಕಾರ್ಯದರ್ಶಿ ಶಶಿಧರ್, ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್, ಡಾ.ಸವಿತಾ, ಮುಖಂಡರಾದ ಬಾವಿಕಟ್ಟೆ ಬಿ.ಎಸ್.ಮಂಜುನಾಥ್, ಟಿ.ಸಿ.ಓಹಿಲೇಶ್ವರ್ ಮೊದಲಾದವರು ಉ‍ಪಸ್ಥಿತರಿದ್ದರು.

ಶಿಬಿರದಲ್ಲಿ 300ಕ್ಕೂ ಹೆಚ್ಚು ಮಂದಿ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು. ಅವರಲ್ಲಿ ನೂರಕ್ಕೂ ಹೆಚ್ಚು ಜನರಿಗೆ ನೇತ್ರ ಶಸ್ತ್ರಚಿಕಿತ್ಸೆ ಅಗತ್ಯವಿರುವುದಾಗಿ ವೈದ್ಯರು ಶಿಫಾರಸು ಮಾಡಿದ್ದು, ಮುಂದಿನ ದಿನಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.