
ಪ್ರಜಾವಾಣಿ ವಾರ್ತೆ
ಹುಳಿಯಾರು: ಹೋಬಳಿಯ ದಸೂಡಿ ಅರಣ್ಯ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಆರ್.ನವೀನ್‌ಕುಮಾರ್ (31) ಹೃದಯಾಘಾತದಿಂದ ಬುಧವಾರ ನಿಧನರಾದರು.
ಎಂದಿನಂತೆ ನಿತ್ಯದ ಕೆಲಸ ಮುಗಿಸಿ ಬುಧವಾರ ಬೆಳಗ್ಗೆ ಮನೆಗೆ ಬಂದವರು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.
ನವೀನ್‌ಕುಮಾರ್ ಜಾವಗಲ್ ಬಳಿಯ ಸಿಂಗಟಗೆರೆ ಗ್ರಾಮದವರಾಗಿದ್ದು, ಹಾಸನ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ವರ್ಷ ಬುಕ್ಕಾಪಟ್ಟಣ ಅರಣ್ಯ ವಲಯಕ್ಕೆ ವರ್ಗಾವಣೆಯಾಗಿ ಬಂದಿದ್ದರು. ಹುಳಿಯಾರು ಅರಣ್ಯ ಇಲಾಖೆ ವಸತಿಗೃಹದಲ್ಲಿ ವಾಸವಾಗಿದ್ದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.