ADVERTISEMENT

ತುರುವೇಕರೆ| ಮಳೆ ಗಾಳಿಗೆ ಉರುಳಿದ ವಿದ್ಯುತ್ ಕಂಬ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 8:46 IST
Last Updated 30 ಏಪ್ರಿಲ್ 2022, 8:46 IST
   

ತುಮಕೂರು: ತುರುವೇಕೆರೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿ ಮಳೆ, ಗಾಳಿಗೆ 15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಪಟ್ಟಣದ ಮಾಯಸಂದ್ರ ರಸ್ತೆ ಮತ್ತು ದಬ್ಬೇಘಟ್ಟ ರಸ್ತೆ ಬದಿಯ ಮರಗಳ ಕೊಂಬೆಗಳು ಗಾಳಿಗೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದು ಲೈನ್ ತುಂಡರಿಸಿವೆ.

ಹುಲಿಕಲ್, ಹೆಗ್ಗೆರೆಯಲ್ಲಿ ರಸ್ತೆಗೆ ಮರ ಮತ್ತು ವಿದ್ಯುತ್ ಕಂಬಗಳು ಬಾಗಿ ಸಂಚಾರಕ್ಕೆ ತೊಂದರೆಯಾಗಿದೆ. ಪಟ್ಟಣ ಸೇರಿದಂತೆ ತಾಲ್ಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯವಾಗಿದೆ. ಬೆಸ್ಕಾಂ ಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT