ADVERTISEMENT

ತುಮಕೂರು: ಪಾಲಿಕೆ ಆವರಣದಲ್ಲಿ ಹೆಲಿಕಾಪ್ಟರ್ ಮಾದರಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 14:04 IST
Last Updated 12 ಏಪ್ರಿಲ್ 2025, 14:04 IST
<div class="paragraphs"><p>ತುಮಕೂರಿನ ಬಿಜಿಎಸ್ ವೃತ್ತದ ಮಹಾನಗರ ಪಾಲಿಕೆ ಆವರಣದಲ್ಲಿ ಹೆಲಿಕಾಪ್ಟರ್ ಮಾದರಿಯನ್ನು ನಿರ್ಮಿಸಲಾಗುತ್ತಿದೆ</p></div>

ತುಮಕೂರಿನ ಬಿಜಿಎಸ್ ವೃತ್ತದ ಮಹಾನಗರ ಪಾಲಿಕೆ ಆವರಣದಲ್ಲಿ ಹೆಲಿಕಾಪ್ಟರ್ ಮಾದರಿಯನ್ನು ನಿರ್ಮಿಸಲಾಗುತ್ತಿದೆ

   

ತುಮಕೂರು: ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಹೆಲಿಕಾಪ್ಟರ್ ಮಾದರಿಯ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಏ. 14ರಂದು ಅಂಬೇಡ್ಕರ್ ಜಯಂತಿ ಆಚರಣೆ ಸಮಯದಲ್ಲಿ ಉದ್ಘಾಟನೆಯಾಗಲಿದೆ.

ಎಚ್‌ಎಎಲ್ ಸಂಸ್ಥೆ ಈ ಹೆಲಿಕಾಪ್ಟರ್ ನಿರ್ಮಿಸುತ್ತಿದೆ. ಗುಬ್ಬಿ ತಾಲ್ಲೂಕಿನಲ್ಲಿರುವ ಕಂಪನಿಯ ಸಿಬ್ಬಂದಿ ಹೆಲಿಕಾಪ್ಟರ್ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ಜಿಲ್ಲೆಯಲ್ಲಿರುವ ಎಚ್‌ಎಎಲ್ ಘಟಕದ ಗುರುತಿಗಾಗಿ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ನೀಡುವ ಸಲುವಾಗಿ ನಿರ್ಮಾಣ ಮಾಡಲಾಗುತ್ತಿದೆ. ಎಚ್‌ಎಎಲ್ ಘಟಕದಿಂದ ಶನಿವಾರ ಮಾದರಿ ಹೆಲಿಕಾಪ್ಟರ್ ತಂದಿದ್ದು, ಅಳವಡಿಸುವ ಕೆಲಸ ನಡೆದಿದೆ.

ನಗರದ ಹೃದಯ ಭಾಗವಾದ ಬಿಜಿಎಸ್ ವೃತ್ತದ ಪಾಲಿಕೆ ಆವರಣದಲ್ಲಿ ನಿರ್ಮಿಸುತ್ತಿದ್ದು, ಇದು ಜಿಲ್ಲಾ ಕೇಂದ್ರದ ಪ್ರಮುಖ ಆಕರ್ಷಣೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.