ADVERTISEMENT

ಪಾವಗಡ: ‘ಬಡ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿ’

ಟಿ.ಎನ್‌. ಬೆಟ್ಟದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 8:26 IST
Last Updated 14 ನವೆಂಬರ್ 2021, 8:26 IST
ಪಾವಗಡ ತಾಲ್ಲೂಕಿನ ನಿಡಗಲ್ ಹೋಬಳಿಯ ಟಿ.ಎನ್. ಬೆಟ್ಟದಲ್ಲಿ ಶನಿವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಾಲ್ಮೀಕಿ ಪೀಠದ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಉದ್ಘಾಟಿಸಿದರು. ಪಿ.ಡಬ್ಲ್ಯು.ಡಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ್ ಕುಮಾರ್, ತಾಲ್ಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ ಲೋಕೇಶ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸೀನಪ್ಪ, ಚಿತ್ತಗಾನಹಳ್ಳಿ ಚಂದ್ರಶೇಖರ್, ಕೆ.ಟಿ. ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಓಬಮ್ಮ ಉಪಸ್ಥಿತರಿದ್ದರು

ಪಾವಗಡ: ‘ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇರುವವರು ಹಿಂದುಳಿದಿರುವ ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಿ ಸಮಾಜದ ಋಣ ತೀರಿಸಿಕೊಳ್ಳಬೇಕು’ ಎಂದು ಲೋಕೋ‍ಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ನಿಡಗಲ್ ಹೋಬಳಿಯ ಟಿ.ಎನ್. ಬೆಟ್ಟದಲ್ಲಿ ಶನಿವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ನೌಕರಿಯಲ್ಲಿರುವವರು, ಸ್ಥಿತಿವಂತರು ಬಡಮಕ್ಕಳ ಶಿಕ್ಷಣಕ್ಕೆ ಅಗತ್ಯ ನೆರವು ನೀಡಬೇಕು ಎಂದು ಸಲಹೆ ನೀಡಿದರು.

ADVERTISEMENT

ವಾಲ್ಮೀಕಿ ಪೀಠದ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ, ‘ವಾಲ್ಮೀಕಿ ಅವರ ತತ್ವ, ಆದರ್ಶಗಳನ್ನು ಸಮುದಾಯದ ಜನರು ಮೈಗೂಡಿಸಿಕೊಳ್ಳಬೇಕು. ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

ತಾಲ್ಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ ಲೋಕೇಶ, ಅಯೋಧ್ಯೆಯಲ್ಲಿ ರಾಮಮಂದಿರದ ಜೊತೆಯಲ್ಲಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣ ಮಾಡಬೇಕು. ತುಮಕೂರು ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು ಎಂದುಕೋರಿದರು.

ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸೀನಪ್ಪ, ಚಿತ್ತಗಾನಹಳ್ಳಿ ಚಂದ್ರಶೇಖರ್, ಕೆ.ಟಿ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಓಬಮ್ಮ, ಮುಖ್ಯಶಿಕ್ಷಕ ನರಸಪ್ಪ, ಮುಖಂಡ ಓಂಕಾರ್ ನಾಯಕ, ಕನ್ನಮೇಡಿ ಸುರೇಶ್, ಅಂಬಿಕಾ ರಮೇಶ್, ನಾಗರಾಜ್, ಶಿವಣ್ಣ, ಈರಣ್ಣ, ನಾಗಣ್ಣ, ರಾಜಕುಮಾರ್, ಬೋರಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.