ಶಿರಾ: ನಗರದ ದೊಡ್ಡಕೆರೆಗೆ ಹೇಮಾವತಿ ನೀರು ಬರುತ್ತಿದ್ದು, ಜನರು ಸಂತಸಗೊಂಡಿದ್ದಾರೆ.
ನಗರಕ್ಕೆ ಕುಡಿಯುವ ನೀರು ಒದಗಿಸುವ ದೊಡ್ಡ ಕೆರೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಈಗ ಹೇಮಾವತಿ ನೀರು ಕೆರೆಗೆ ಹರಿಯುತ್ತಿರುವುದರಿಂದ ಕುಡಿಯುವ ನೀರಿಗೆ ಹೆಚ್ಚಿನ ಅನುಕೂಲವಾಗುವುದು. ನಗರಕ್ಕೆ 2004ರಿಂದ ಹೇಮಾವತಿ ನೀರು ಬರುತ್ತಿದ್ದು ಕುಡಿಯುವ ನೀರಿನ ಮೂಲವಾಗಿದೆ. ಹೇಮಾವತಿ ಜಲಾಶಯ ಭರ್ತಿಯಾಗುತ್ತಿದ್ದು, ಹೆಚ್ಚಿನ ನೀರು ಹರಿದು ಬರುವುದರಿಂದ ಈ ಬಾರಿ ಸಹ ಶಿರಾ ಕೆರೆ ಭರ್ತಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವುದು ಜನರ ವಿಶ್ವಾಸ.
ಹೇಮಾವತಿ ನೀರು ಕೆರೆಗೆ ಹರಿದು ಬರುತ್ತಿದ್ದು, ಕೆರೆಯಲ್ಲಿ ಸ್ವಚ್ಛತೆ ಕಾಪಾಡಬೇಕಿದ್ದ ನಗರಸಭೆ ಮೌನವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳ್ಳಂಬೆಳ್ಳ ಕೆರೆ ಭರ್ತಿಯಾಗುವವರೆಗೂ ಕಾಯದೆ ಶಿರಾ ಕೆರೆಗೆ ನೀರು ಹರಿಸುತ್ತಿರುವುದರಿಂದ ಕುಡಿಯುವ ನೀರಿನ ಕೊರತೆ ನೀಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.