ADVERTISEMENT

ತುಮಕೂರು: ಸೆ. 7ರಂದು ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 7:11 IST
Last Updated 31 ಆಗಸ್ಟ್ 2024, 7:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಹಿಂದೂ ಮಹಾಗಣಪತಿ ಸ್ವಾಗತ ಸಮಿತಿಯಿಂದ ನಗರದ ಬಿಜಿಎಸ್‌ ವೃತ್ತದ ಬಳಿಯ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನ ಸೆ. 7ರಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.

‘6 ವರ್ಷದಿಂದ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದಿಂದ ಗಣಪತಿ ಉತ್ಸವ ಆಚರಿಸಲಾಗುತ್ತಿದೆ. ಹಿಂದೂಗಳಲ್ಲಿ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವನೆ ಮೂಡಿಸಲು ಹಬ್ಬ ಆಚರಿಸಲಾಗುತ್ತಿದೆ’ ಎಂದು ಮಹಾಗಣಪತಿ ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್‌ ಇಲ್ಲಿ ಗುರುವಾರ ತಿಳಿಸಿದರು.

15 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದೆ. ಪ್ರತಿ ದಿನ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಸೆ. 21ರಂದು ವಿಸರ್ಜನಾ ಮೆರವಣಿಗೆ ಅದ್ದೂರಿಯಾಗಿ ನೆರವೇರಲಿದೆ. ಜಿಲ್ಲೆಯ ಸಮಸ್ತ ಹಿಂದೂ ಸಮಾಜದವರ ಸಹಭಾಗಿತ್ವದಲ್ಲಿ ಹಲವು ಕಾರ್ಯಗಳು ನಡೆಯಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ADVERTISEMENT

ಮುಖಂಡರಾದ ಕೋರಿ ಮಂಜುನಾಥ್‌, ಜಿ.ಕೆ.ಶ್ರೀನಿವಾಸ್‌, ಆರ್‌.ಎಲ್‌.ರಮೇಶ್‌ಬಾಬು, ಡಿ.ಸಿ.ನರಸಿಂಹಮೂರ್ತಿ, ಪುರುಷೋತ್ತಮ್‌, ಮಾರಣ್ಣ ಪಾಳೇಗಾರ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.