ADVERTISEMENT

ತುಮಕೂರ | ಎಚ್‌.ಎಂ.ಗಂಗಾಧರಯ್ಯ ಸಂಸ್ಮರಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 7:03 IST
Last Updated 6 ಡಿಸೆಂಬರ್ 2025, 7:03 IST
ತುಮಕೂರಿನ ಗೊಲ್ಲಹಳ್ಳಿಯಲ್ಲಿ ಶುಕ್ರವಾರ ಜಿ.ಪರಮೇಶ್ವರ ಅವರು ಎಚ್‌.ಎಂ.ಗಂಗಾಧರಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಟ್ರಸ್ಟಿ ಕನ್ನಿಕಾ ಪರಮೇಶ್ವರ ಇತರರು ಹಾಜರಿದ್ದರು
ತುಮಕೂರಿನ ಗೊಲ್ಲಹಳ್ಳಿಯಲ್ಲಿ ಶುಕ್ರವಾರ ಜಿ.ಪರಮೇಶ್ವರ ಅವರು ಎಚ್‌.ಎಂ.ಗಂಗಾಧರಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಟ್ರಸ್ಟಿ ಕನ್ನಿಕಾ ಪರಮೇಶ್ವರ ಇತರರು ಹಾಜರಿದ್ದರು   

ತುಮಕೂರು: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಚ್.ಎಂ.ಗಂಗಾಧರಯ್ಯ ಅವರ ಸ್ಮರಣೋತ್ಸವ ಕಾರ್ಯಕ್ರಮ ನಗರ ಹೊರವಲಯದ ಗೊಲ್ಲಹಳ್ಳಿಯಲ್ಲಿ ಶುಕ್ರವಾರ ನೆರವೇರಿತು.

ಬೌದ್ಧ ಬಿಕ್ಕು ಬಂತೇಜಿ ಮಹಾಸಂಘದ ಸಮ್ಮುಖದಲ್ಲಿ ವಿಜಯಪುರದ ಬೌದ್ಧ ಬಿಕ್ಕುಗಳು ಪ್ರಾರ್ಥನೆ ಸಲ್ಲಿಸಿದರು. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಜಿ.ಪರಮೇಶ್ವರ, ಆಡಳಿತ ಮಂಡಳಿ ಟ್ರಸ್ಟಿ ಕನ್ನಿಕಾ ಪರಮೇಶ್ವರ ಅವರು ಎಚ್.ಎಂ.ಗಂಗಾಧರಯ್ಯ, ಪತ್ನಿ ಗಂಗಮಾಳಮ್ಮ, ಪುತ್ರ ಜಿ.ಶಿವಪ್ರಸಾದ್‌ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಿದರು.

ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಚ್.ಕೆ.ಕುಮಾರಸ್ವಾಮಿ, ಆಡಳಿತಾಧಿಕಾರಿ ನಂಜುಂಡಪ್ಪ, ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ.ಪ್ರಭಾಕರ್, ಪರೀಕ್ಷಾಂಗ ನಿಯಂತ್ರಕ ಡಾ.ಗುರುಶಂಕರ್‌, ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ರವಿಪ್ರಕಾಶ್‌ ಇತರರು ಪಾಲ್ಗೊಂಡಿದ್ದರು.

ADVERTISEMENT