ADVERTISEMENT

ತುಮಕೂರಿನಲ್ಲಿ ರೈತ ಸಮಾವೇಶ: ಪ್ರಧಾನಿ ಭೇಟಿ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 12:58 IST
Last Updated 22 ಡಿಸೆಂಬರ್ 2019, 12:58 IST
ಪ್ರಧಾನಿ ನರೇಂದ್ರ ಮೋದಿ ಜ.3 ರಂದು ತುಮಕೂರಿಗೆ ಭೇಟಿ ನೀಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾನುವಾರ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಜ.3 ರಂದು ತುಮಕೂರಿಗೆ ಭೇಟಿ ನೀಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾನುವಾರ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.   

ತುಮಕೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾನುವಾರ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಜ.3 ರಂದು ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡುವ ಸಾಧ್ಯತೆ ಇದೆ. ಅಂದು ಜೂನಿಯರ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ಆಯೋಜಿಸಲಿದ್ದು, ಈ ಸಮಾವೇಶದಲ್ಲಿ 2ನೇ ಹಂತದ ರೈತ ಸಮ್ಮಾನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವರು’ ಎಂದು ತಿಳಿಸಿದರು.

ಅಂದು ಬೆಳಿಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿಯವರು ಮಠದಲ್ಲಿ ಲಿಂಗೈಕ್ಯ ಶ್ರೀಗಳ ಗದ್ದುಗೆ ದರ್ಶನ ಪಡೆದು ಅರ್ಧಗಂಟೆ ಮಠದಲ್ಲಿ ಕಾಲ ಕಳೆಯುವರು. ನಂತರ ರೈತರ ಸಮಾವೇಶದಲ್ಲಿ ಪಾಲ್ಗೊಂಡು ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಭಾಗವಹಿಸುವ ರೈತರ ಸಮಾವೇಶದಲ್ಲಿ ರಾಜ್ಯದ ವಿವಿಧೆಡೆಗಳಿಂದ ರೈತರು, ರೈತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಬಿ.ಸುರೇಶ್‍ಗೌಡ, ಡಾ.ಎಂ.ಆರ್.ಹುಲಿನಾಯ್ಕರ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಬಿಜೆಪಿ ಮುಖಂಡ ಎಸ್.ಶಿವಪ್ರಸಾದ್ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.