ತುಮಕೂರು: ‘ನನ್ನನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಬಗ್ಗೆ ಇನ್ನೂ ದೂರು ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ದೂರು ನೀಡಲಾಗುವುದು’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಬಗ್ಗೆ ಬೆಂಗಳೂರಿಗೆ ಹೋದ ಮೇಲೆ ಸೂಕ್ತ ಸಮಯದಲ್ಲಿ ದೂರು ನೀಡಲಾಗುವುದು. ಅದಕ್ಕೆ ಸಮಯ ನಿಗದಿಪಡಿಸಿಕೊಂಡಿಲ್ಲ’ ಎಂದರು.
‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹನಿಟ್ರ್ಯಾಪ್ ಸೂತ್ರಧಾರ’ ಎಂಬ ಶಾಸಕ ಮುನಿಯತ್ನ ಆರೋಪಕ್ಕೆ ಪ್ರತಿಕ್ರಿಸಿದ ಅವರು, ‘ಅದು ಅವರ ಅಭಿಪ್ರಾಯ. ಆ ವಿಚಾರ ನನಗೆ ಗೊತ್ತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.