ADVERTISEMENT

ತುಮಕೂರು ವಿಶ್ವವಿದ್ಯಾಲಯ: ಹಂಪನಾ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 6:38 IST
Last Updated 6 ಜುಲೈ 2025, 6:38 IST
ಹಂ.ಪ.ನಾಗರಾಜಯ್ಯ
ಹಂ.ಪ.ನಾಗರಾಜಯ್ಯ   

ತುಮಕೂರು: ತುಮಕೂರು ವಿಶ್ವವಿದ್ಯಾಲಯ ಈ ಬಾರಿ ಸಾಹಿತಿ ಹಂಪನಾ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ. ಸಾಹಿತಿ ಹಂ.ಪ.ನಾಗರಾಜಯ್ಯ, ಉದ್ಯಮಿ, ಮೈಕ್ರೋ ಲ್ಯಾಬ್ಸ್ ಕಂಪನಿ ಮುಖ್ಯಸ್ಥ ದಿಲೀಪ್ ಸುರಾನ ಹಾಗೂ ಪತ್ರಿಕೋದ್ಯಮಿ ಎಸ್.ನಾಗಣ್ಣ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.

ವಿಶ್ವವಿದ್ಯಾಲಯದಲ್ಲಿ ಜುಲೈ 8ರಂದು ನಡೆಯುವ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.

ಸಮಿತಿ ರಚನೆ: ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿರುವ ಎಸ್.ನಾಗಣ್ಣ ವಿರುದ್ಧ ನ್ಯಾಯಾಲಯಗಳಲ್ಲಿ ಕೆಲವು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂಬ ಬಗ್ಗೆ ಮಾಹಿತಿ ಗೊತ್ತಾಗಿದೆ. ಈ ಬಗ್ಗೆ ವರದಿ ಸಲ್ಲಿಸಲು ಸಮಿತಿ ರಚಿಸಲಾಗುವುದು. ಈ ಸಮಿತಿ ನೀಡುವ ವರದಿಯನ್ನು ತಕ್ಷಣವೇ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ADVERTISEMENT

ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದಿಲ್ಲ. ನಾಗಣ್ಣ ವಿರುದ್ಧ ಪ್ರಕರಣಗಳು ಇರುವುದು ಗಮನಕ್ಕೆ ಬಂದಿರಲಿಲ್ಲ. ಆಯ್ಕೆ ಸಮಿತಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ತಕ್ಷಣವೇ ವರದಿ ಸಲ್ಲಿಸಲಾಗುವುದು. ಪ್ರಕರಣಗಳು ಇದ್ದರೆ ಗೌರವ ಡಾಕ್ಟರೇಟ್‌ಗೆ ಮಾಡಿರುವ ಆಯ್ಕೆ ರದ್ದುಪಡಿಸುವ ಅಧಿಕಾರ ರಾಜ್ಯಪಾಲರಿಗೆ ಇದೆ. ಪದವಿ ಪ್ರದಾನ ಮಾಡಿದ ನಂತರವೂ ವಾಪಸ್ ಪಡೆಯುವ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ದಿಲೀಪ್ ಸುರಾನ
ಎಸ್.ನಾಗಣ್ಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.