ADVERTISEMENT

ಆಸ್ಪತ್ರೆಗೆ ಭೇಟಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 21 ಮೇ 2021, 16:54 IST
Last Updated 21 ಮೇ 2021, 16:54 IST
ಶಾಸಕ ಡಾ.ಜಿ.ಪರಮೇಶ್ವರ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಮ್ಲಜನಕ ದಾಸ್ತಾನು ಪರಿಶೀಲಿಸಿದರು
ಶಾಸಕ ಡಾ.ಜಿ.ಪರಮೇಶ್ವರ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಮ್ಲಜನಕ ದಾಸ್ತಾನು ಪರಿಶೀಲಿಸಿದರು   

ಕೊರಟಗೆರೆ: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ನಿಖರವಾಗಿ ನೀಡುತ್ತಿಲ್ಲ ಎಂದು ಶಾಸಕ ಡಾ.ಜಿ.ಪರಮೇಶ್ವರ ಆರೋಪಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆಶುಕ್ರವಾರ ಭೇಟಿ ನೀಡಿ ಆಮ್ಲಜನಕ ದಾಸ್ತಾನು ಹಾಗೂ ಕೋವಿಡ್‌ ಚಿಕಿತ್ಸೆ ಬಗ್ಗೆ ಪರಿಶೀಲಿಸಿ ಮಾತನಾಡಿದರು.

ತಾಲ್ಲೂಕು ಸೇರಿದಂತೆ ರಾಜ್ಯದಾದ್ಯಂತ ಅಧಿಕಾರಿಗಳು ಕೋವಿಡ್‌ನಿಂದ ಸತ್ತವರ ಸಂಖ್ಯೆಯನ್ನು ನಿಖರವಾಗಿ ನೀಡುತ್ತಿಲ್ಲ. ಸರ್ಕಾರವೇ ಸಾವಿನ ಸಂಖ್ಯೆ ಕಡಿಮೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದೆಯೊ ಎಂಬ ಅನುಮಾನ ಕಾಡುತ್ತಿದೆ ಎಂದರು.

ADVERTISEMENT

ತಾಲ್ಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿ ಅವರಲ್ಲಿ ಧೈರ್ಯ ತುಂಬಬೇಕು. ಯಾವುದೇ ವ್ಯಕ್ತಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ಬಂದರೆ ಅವರನ್ನು ಅಲೆದಾಡಿಸದೇ ಕೂಡಲೇ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು. ಟಿಎಚ್ಒ ಹಾಗೂ ಆರೋಗ್ಯಾಧಿಕಾರಿ ನಡುವೆ ಸಮನ್ವಯ ಕೊರತೆ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದು ಮುಂದುವರೆದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಇಬ್ಬರೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸೋಂಕು ಹೆಚ್ಚುತ್ತಿದ್ದು, ಲಾಕ್‌ಡೌನ್‌ ಇನ್ನಷ್ಟು ಬಿಗಿಗೊಳಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಆಮ್ಲಜನಕ ದಸ್ತಾನು ಹಾಗೂ ಲಸಿಕೆ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನ ಜನರಿಗೆ ಮೊದಲ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಸೂಚಿಸಿದರು.

ಪಟ್ಟಣ ಪಂಚಾಯಿತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸ್ಯಾನಿಟೈಸರ್‌ ಸಿಂಪಡಿಸಿದರು. ಪಡಿತರ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಅಶೋಕ್, ಇಒ ಎಸ್.ಶಿವಪ್ರಕಾಶ್, ಪಿಎಸ್ಐ ಎಚ್.ಮುತ್ತುರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಕುಮಾರ್, ಸದಸ್ಯರಾದ ಕೆ.ಆರ್.ಓಬಳರಾಜು, ಎ.ಡಿ.ಬಲರಾಮಯ್ಯ, ನಾಗರಾಜು, ಮುಖಂಡರಾದ ಎಲ್.ರಾಜಣ್ಣ, ಚಿಕ್ಕರಂಗಯ್ಯ, ಟಿ.ಸಿ.ರಾಮಯ್ಯ, ವೆಂಕಟಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.