ADVERTISEMENT

ಅಲ್ಪಸಂಖ್ಯಾತರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 17 ಮೇ 2019, 12:37 IST
Last Updated 17 ಮೇ 2019, 12:37 IST

ತುರುವೇಕೆರೆ: ಅಲ್ಪಸಂಖ್ಯಾತರ ಕಲ್ಯಾಣ ವಿಭಾಗದಿಂದ 2019-20ನೇ ಸಾಲಿನ ತಿಪಟೂರು, ತುರುವೇಕೆರೆ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಬೌದ್ಧ, ಜೈನ ವಿದ್ಯಾರ್ಥಿಗಳಿಗೆ ಶೇ 75 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸ್ಥಾನಗಳನ್ನು ಮೀಸಲಿರಿಸಿದ್ದು, ವಿದ್ಯಾರ್ಹತೆ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ತುರುವೇಕೆರೆ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಅರ್ಜಿಗಳನ್ನು ಉಚಿತವಾಗಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ ಎಂದು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.