ADVERTISEMENT

ಮಧುಗಿರಿ: ಸಿಬ್ಬಂದಿ ಮೇಲೆ ಪತಿ ದಬ್ಬಾಳಿಕೆ, ಹಾಸ್ಟೆಲ್ ವಾರ್ಡನ್ ನಿವೇದಿತಾ ಅಮಾನತು

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 7:49 IST
Last Updated 14 ಜುಲೈ 2022, 7:49 IST

ತುಮಕೂರು: ಮಧುಗಿರಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ವಾರ್ಡನ್ ನಿವೇದಿತಾ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ, ವಾರ್ಡನ್ ನಿವೇದಿತಾ ಪತಿ ರಂಗನಾಥ್ ಹಾಸ್ಟೆಲ್‌ ವ್ಯವಹಾರದಲ್ಲಿ ಹಸ್ತಕ್ಷೇಪ, ಬಾಲಕಿಯರು ಇರುವ ಹಾಸ್ಟೆಲ್‌ಗೆ ಪ್ರತಿ ದಿನ ಪ್ರವೇಶಿಸಿ ವಿದ್ಯಾರ್ಥಿನಿಯರು, ಸಿಬ್ಬಂದಿ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ವಿಷಯ ತಿಳಿದು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಹಾಸ್ಟೆಲ್‌ಗೆ ಭೇಟಿ ನೀಡಿದ್ದಾಗ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು. ಈ ಅಧಿಕಾರಿಯ ವರದಿ ಆಧರಿಸಿ ಅಮಾನತ್ತು ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.