ADVERTISEMENT

ತುಮಕೂರಲ್ಲಿ ಜಿಲೆಟಿನ್ ಸ್ಫೋಟ: ಮನೆ ಧ್ವಂಸ: ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 7:53 IST
Last Updated 2 ಫೆಬ್ರುವರಿ 2021, 7:53 IST
   

ತುಮಕೂರು: ತಾಲ್ಲೂಕಿನ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ ಜಿಲೆಟಿನ್, ಗನ್‌ಪೌಡರ್ ಸ್ಫೋಟಗೊಂಡು ಮನೆ ಧ್ವಂಸಗೊಂಡಿದ್ದು, ಮಹಿಳೆ ಗಾಯಗೊಂಡಿದ್ದಾರೆ.

ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಈ ಸ್ಫೋಟ ನಡೆದಿದೆ. ಮನೆಯಲ್ಲಿದ್ದ ಸುವರ್ಣಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲ್ಲು ಕ್ವಾರಿ ಸ್ಫೋಟಿಸಲು ಮನೆಯಲ್ಲಿ ಜಿಲೆಟಿನ್, ಗನ್‌ಪೌಡರ್ ದಾಸ್ತಾನು ಮಾಡಲಾಗಿತ್ತು. ಸ್ಫೋಟದ ನಂತರ ಶೋಧ ನಡೆಸಿದ್ದು, ಮನೆಯಲ್ಲಿ ನಾಡ ಬಂದೂಕು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.