
ಪ್ರಜಾವಾಣಿ ವಾರ್ತೆ
ಬೆಂಕಿ (ಪ್ರಾತಿನಿಧಿಕ ಚಿತ್ರ)
ಶಿರಾ: ತಾಲ್ಲೂಕಿನ ಬಂದಕುಂಟೆ ಗೊಲ್ಲರಹಟ್ಟಿಯಲ್ಲಿ ಗುರುವಾರ ರಾತ್ರಿ ಆಕಸ್ಮಿಕವಾಗಿ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಎಲ್ಲ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಬಂದಕುಂಟೆ ಗೊಲ್ಲರಹಟ್ಟಿಯ ಮೂಡ್ಲಪ್ಪ ಅವರ ಮನೆಗೆ ಬೆಂಕಿ ಬಿದ್ದಿದೆ. ಕುಟುಂಬದವರು ದೇವಸ್ಥಾನಕ್ಕೆ ತೆರಳಿದ್ದ ಕಾರಣ ಮನೆಯಲ್ಲಿ ಯಾರು ಇರಲಿಲ್ಲ. ಕುರಿ ಮಾರಾಟದಿಂದ ಬಂದಿದ್ದ ₹3 ಲಕ್ಷ ಸೇರಿದಂತೆ ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ, ಬಟ್ಟೆ ಎಲ್ಲವೂ ಸುಟ್ಟು ಹೋಗಿದೆ.
ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ವೇಳೆಗೆ ಸಂಪೂರ್ಣವಾಗಿ ಸುಟ್ಟು ಹೋಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.