
ಪ್ರಜಾವಾಣಿ ವಾರ್ತೆ
ಶಿರಾ: ತಾಲ್ಲೂಕಿನ ವಡ್ಡನಹಳ್ಳಿಯಲ್ಲಿ ಬುಧವಾರ ರಾತ್ರಿ ಮನೆಯ ಬಾಗಿಲ ಬೀಗ ಒಡೆದು ಕಳ್ಳರು ಸುಮಾರು ₹15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ತಾಲ್ಲೂಕಿನ ವಡ್ಡನಹಳ್ಳಿ ಗ್ರಾಮದ ಕಾರ್ತಿಕ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅವರ ತಂದೆ, ತಾಯಿ ಇಲ್ಲಿ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮಗನ ಮನೆಗೆ ಹೋಗಿದ್ದರು.
ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು ಮನೆಯ ಬೀಗ ಒಡೆದು ಒಳಗೆ ನುಗ್ಗಿ ಮನೆಯಲ್ಲಿದ್ದ ₹2 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.