ಹುಳಿಯಾರು: ಅಲೆಮಾರಿಗಳಿಗೆ ನಿವೇಶನ ನೀಡಿ ವರ್ಷಗಳು ಕಳೆದರೂ ಅವರಿಗೆ ಮನೆ ಕಟ್ಟಕೊಳ್ಳಲು ವಿಶೇಷ ಅನುದಾನ ನೀಡಿಲ್ಲ. ಗಣಿ ಬಾಧಿತ ಪ್ರದೇಶದಲ್ಲಿ ಬರುವುದರಿಂದ ಮನೆ ನಿರ್ಮಾಣಕ್ಕೆ ₹10 ಲಕ್ಷ ನೀಡುವಂತೆ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ರಾಜ್ಯ ಉಪಾಧ್ಯಕ್ಷ ಉಜ್ಜಜ್ಜಿ ರಾಜಣ್ಣ ಒತ್ತಾಯಿಸಿದರು.
ಹೋಬಳಿಯ ಕಂಪನಹಳ್ಳಿ ಬಳಿಯ ಅಲೆಮಾರಿಗಳ ವಸತಿ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದರು.
ಗಣಿ ಬಾಧಿತ ಪ್ರದೇಶಗಳ ಅಲೆಮಾರಿ ವಸತಿ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಗಣಿ ಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಶೇಷ ಕ್ರಿಯಾ ಯೋಜನೆ ರೂಪಿಸಿ ಅನುದಾನ ಬಿಡುಗಡೆ ಮಾಡವಂತೆ ಒತ್ತಾಯಿಸಿದರು. ನಿವೇಶನ ಹೊಂದಿರುವ ಪಲಾನುಭವಿಗಳು ಮನೆ ಕಟ್ಟಿಕೊಳ್ಳುವವರೆಗೆ ತಾತ್ಕಾಲಿಕವಾಗಿ ಕಂಟೈನರ್ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ಅಲೆಮಾರಿ ಕುಟುಂಬಗಳಿಗೆ ತಾತ್ಕಾಲಿಕವಾಗಿ ಸೂರುಗಳನ್ನು ಒದಗಿಸುವಂತಾಗಲಿ ಎಂದರು.
ಮಹಿಳಾ ಆಯೋಗದ ಅಧ್ಯಕ್ಷೆ, ಉಪವಿಭಾಗಾದಿಕಾರಿ ಭೇಟಿ ನೀಡಿ ಆದೇಶಿಸಿದ್ದರೂ ವರಿಷ್ಟರ ಆದೇಶಗಳನ್ನು ಸ್ಥಳೀಯ ಆಡಳಿತ ನಿರ್ಲಕ್ಷಿಸಿದೆ ಎಂದರು.
ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.