ಸಾವು
(ಪ್ರಾತಿನಿಧಿಕ ಚಿತ್ರ)
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ತಮ್ಮಡಿಹಳ್ಳಿ ಗ್ರಾಮದ ರಾಜಶೇಖರ್ ಅವರ ಮಗ ಪ್ರೀತಮ್ (13) ಅವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ.
ಬುಧವಾರ ಪ್ರೀತಮ್ ಪೋಷಕರು ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಮಧ್ಯಾಹ್ನದ ಊಟ ತೆಗೆದುಕೊಂಡು ಹೋದ ಪ್ರೀತಮ್ ಇನ್ನೊಂದು ಹೊಲಕ್ಕೆ ಹೋಗುವುದಾಗಿ ಪೋಷಕರಿಗೆ ತಿಳಿಸಿ ಕೃಷಿ ಹೊಂಡದಲ್ಲಿ ಈಜು ಕಲಿಯಲು ಹೋಗಿದ್ದಾನೆ. ಅಲ್ಲಿಯೇ ಮೃತಪಟ್ಟಿದ್ದಾನೆ. ಸಂಜೆಯಾದರು ಬಾರದಾಗ ಪೋಷಕರು ಕೃಷಿಹೊಂಡದ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.