ಸಾವು (ಪ್ರಾತಿನಿಧಿಕ ಚಿತ್ರ)
ಹುಳಿಯಾರು: ಸಮೀಪದ ಯರೇಕಟ್ಟೆ ಗ್ರಾಮದ ಕೆರೆ ಬಳಿ ಬಹಿರ್ದೆಸೆಗೆ ತೆರಳಿದ್ದ ವೇಳೆ ತಂದೆ, ಮಗಳು ಹಾಗೂ ಅಣ್ಣನ ಮೊಮ್ಮಗಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ (12) ಹಾಗೂ ವೆಂಕಟೇಶ್ ಅವರ ಅಣ್ಣನ ಮೊಮ್ಮಗಳು ಪುಣ್ಯ (11) ಮೃತರು.
ಸಂಜೆ 6 ಗಂಟೆ ಸಮಯದಲ್ಲಿ ಗ್ರಾಮದ ಬಳಿ ಕೆರೆ ಕಡೆ ಬಹಿರ್ದೆಸೆಗೆ ಶ್ರಾವ್ಯ, ಪುಣ್ಯ ಸೇರಿದಂತೆ ಮೂವರು ಹೋಗಿದ್ದಾರೆ. ಕೆರೆಯಲ್ಲಿ ನೀರು ಮುಟ್ಟಲು ಹೋಗಿ ಶ್ರಾವ್ಯ ಹಾಗೂ ಪುಣ್ಯ ಕಾಲು ಜಾರಿ ಬಿದ್ದಿದ್ದಾರೆ.
ರಕ್ಷಣೆಗೆ ವೆಂಕಟೇಶ್ ಹಾಗೂ ಮಂಜುನಾಥ್ ಹೋಗಿದ್ದರು. ಈ ವೇಳೆ ವೆಂಕಟೇಶ್ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ವೆಂಕಟೇಶ್ ಹಾಗೂ ಶ್ರಾವ್ಯ ಮುಳುಗಿ ಮೃತಪಟ್ಟರೆ, ಪುಣ್ಯ ಹುಳಿಯಾರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.