
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಹುಳಿಯಾರು: ಸಮೀಪದ ಚೋರಗೊಂಡನಹಳ್ಳಿ ಕೆರೆ ಬಳಿ ಮಂಗಳವಾರ ರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಟ್ರೈಲರ್ ಅಲ್ಲಿ ಕುಳಿತಿದ್ದ ವ್ಯಕ್ತಿ ಗಾಯಗೊಂಡಿದ್ದಾರೆ.
ಯಳನಡು ಗ್ರಾಮದ ಉಮೇಶ್ (48) ಮೃತಪಟ್ಟವರು. ಕಬ್ಬಿಣದ ಸರಕು ತುಂಬಿಕೊಂಡು ಹೋಗುವಾಗ ಕರೆ ಬಳಿ ಕಡಿದಾದ ರಸ್ತೆ ಇದ್ದ ಕಾರಣ ಘಟನೆ ಸಂಭವಿಸಿದೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.