ADVERTISEMENT

ಪತ್ನಿ, ಮೂವರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2023, 14:02 IST
Last Updated 13 ಮಾರ್ಚ್ 2023, 14:02 IST
   

ಮಧುಗಿರಿ: ಅನೈತಿಕ ಸಂಬಂಧ ಹೊಂದಿರಬಹುದೆಂದು ಅನುಮಾನಗೊಂಡ ಪತಿ ತನ್ನ ಪತ್ನಿ, ಮೂವರು ಹೆಣ್ಣು ಮಕ್ಕಳು ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮನೆಗೆ ಬೀಗ ಹಾಕಿ ಪರಾರಿಯಾಗಿರುವ ಘಟನೆ ಸೋಮವಾರ ಮುಂಜಾನೆ ತಾಲ್ಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿದೆ.

ಪತ್ನಿ ಶಾಂತಮ್ಮ (49) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಹೆಣ್ಣು ಮಕ್ಕಳಿಗೆ ಸುಟ್ಟು ಗಾಯಗಳಾಗಿವೆ. ಎಲ್ಲರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ರಾಮಾಂಜನಪ್ಪ ಕೃತ್ಯ ಎಸಗಿದ ಆರೋಪಿ. ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT