ADVERTISEMENT

ಲೋಕಸಭೆ ಚುನಾವಣೆ | ಚಿಕ್ಕಮಗಳೂರಿನಿಂದಲೇ ಸ್ಪರ್ಧೆ, ತುಮಕೂರಿಗೆ ಬರಲ್ಲ: ಶೋಭಾ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 10:38 IST
Last Updated 24 ಜನವರಿ 2024, 10:38 IST
 ಶೋಭಾ ಕರಂದ್ಲಾಜೆ
 ಶೋಭಾ ಕರಂದ್ಲಾಜೆ   

ತುಮಕೂರು: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದರು.

‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.