ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್‌ಗೆ ಸಿಲುಕಿದ್ದಾರೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಅಂತಹ ಸಿ.ಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಸವಾಲು ಹಾಕಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹನಿಟ್ರ್ಯಾಪ್ ಹಿಂದೆ ಇರುವ ಮಹಾನಾಯಕ ಯಾರು ಎನ್ನುವುದಕ್ಕಿಂತ ಇದು ಇಲ್ಲಿಗೆ ಅಂತ್ಯವಾಗಬೇಕು. ಮುಂದಿನ ದಿನಗಳಲ್ಲಿ ಯಾರಿಗೂ ಹೀಗೆ ಆಗಬಾರದು ಎಂದು ಅಭಿಪ್ರಾಯಪಟ್ಟರು.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿಚಾರದಲ್ಲಿ ಕುಣಿಗಲ್ ಶಾಸಕರ ಕಡೆಯವರು ಬೆದರಿಕೆ ಹಾಕಿದ್ದಾರೆ. ಹನಿಟ್ರ್ಯಾಪ್ ಯತ್ನದ ಬಗ್ಗೆ ದೂರು ನೀಡುವಾಗ ಈ ಅಂಶ ಕೂಡ ಸೇರಿಸಲಾಗುವುದು ಎಂದು ಹೇಳಿದರು.
ಇನ್ನಷ್ಟು ಹೇಳುವುದಿದೆ: ಕೆ.ಎನ್. ರಾಜಣ್ಣ
ತುಮಕೂರು: ‘ಹನಿಟ್ರ್ಯಾಪ್ ಸಿಲುಕಿಸಲು ಯತ್ನಿಸಿದವರ ಬಗ್ಗೆ ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದೇನೆ. ಮುಂದಿನ ದಿನಗಳಲ್ಲಿ ವಿವರವಾಗಿ ಹೇಳುತ್ತೇನೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ನಾನು ಯಾವುದಕ್ಕೂ ಎದೆಗುಂದುವುದಿಲ್ಲ. ವಿಚಲಿತನಾಗುವುದಿಲ್ಲ. ಸ್ಥಿತಪ್ರಜ್ಞನಾಗಿದ್ದು ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ’ ಎಂದರು. ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಬಿಜೆಪಿಯವರು ಹೇಳಿದಂತೆ ಕೇಳಲು ಆಗುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.