ADVERTISEMENT

‘ಸ್ವಚ್ಛತೆ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ’

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 3:57 IST
Last Updated 30 ಸೆಪ್ಟೆಂಬರ್ 2020, 3:57 IST
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್‌ಮನ್‌ಗಳಿಗೆ ನೇರ ವೇತನ ಜಾರಿಗೆ ಒತ್ತಾಯಿಸಿ ಹೊರ ಗುತ್ತಿಗೆ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್‌ಮನ್‌ಗಳಿಗೆ ನೇರ ವೇತನ ಜಾರಿಗೆ ಒತ್ತಾಯಿಸಿ ಹೊರ ಗುತ್ತಿಗೆ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಮಧುಗಿರಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್‌ಮನ್‌ಗಳಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಹೊರ ಗುತ್ತಿಗೆ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಸುರೇಶ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಎರಡು ವಿಭಾಗಗಳಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸ್ವಚ್ಛತೆ ನಿರ್ವಹಣೆಯಲ್ಲಿ ತ್ಯಾಜ್ಯ ಸಾಗಾಣಿಕೆ ಚಾಲಕರ ಪಾತ್ರ ದೊಡ್ಡದು. ಪೌರಕಾರ್ಮಿಕರಿಗೆ ಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ವಾಟರ್ ಮನ್‌ಗಳಿಗೂ ಯಾವುದೇ ಸೇವಾ ಭದ್ರತೆಯಿಲ್ಲದೆ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ಆಧಾರಿತ ನೌಕರರನ್ನು ನೇರ ವೇತನಕ್ಕೆ ಒಳಪಡಿಸಬೇಕು ಹಾಗೂ ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಲ್ಲೂಕು ಸಂಚಾಲಕ ಆರ್.ಮಂಜುನಾಥ್, ಉಪಾಧ್ಯಕ್ಷ ತೌಸಿಫ್, ಕಾರ್ಯದರ್ಶಿ ಪ್ರಸಾದ್ ಕುಮಾರ್, ತಾಲ್ಲೂಕು ಸಫಾಯಿ ಕರ್ಮಚಾರಿ ಕಾವಲು ಸಮಿತಿ ಸಂಚಾಲಕ ಸಿದ್ದಗಂಗಯ್ಯ, ಪದಾಧಿಕಾರಿಗಳಾದ ಕಲೀಂ, ಕಾಂತರಾಜು, ನಾಗೇಶ್, ಚಲಪ್ಪ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.