ADVERTISEMENT

ದಲಿತ ಹಕ್ಕುಗಳ ಸಮಿತಿ ಉದ್ಘಾಟನೆ

ಶೋಷಣೆ ತಡೆಗೆ ಶಿಕ್ಷಣವೇ ಅಸ್ತ್ರ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 5:12 IST
Last Updated 28 ಸೆಪ್ಟೆಂಬರ್ 2022, 5:12 IST
ಕುಣಿಗಲ್‌ ತಾಲ್ಲೂಕಿನ ತರೇದಕುಪ್ಪೆ ಗ್ರಾಮದಲ್ಲಿ ನಡೆದ ದಲಿತ ಹಕ್ಕುಗಳ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಮಾತನಾಡಿದರು. ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ಹಾಜರಿದ್ದರು
ಕುಣಿಗಲ್‌ ತಾಲ್ಲೂಕಿನ ತರೇದಕುಪ್ಪೆ ಗ್ರಾಮದಲ್ಲಿ ನಡೆದ ದಲಿತ ಹಕ್ಕುಗಳ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಮಾತನಾಡಿದರು. ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ಹಾಜರಿದ್ದರು   

ಕುಣಿಗಲ್: ‘ಶಿಕ್ಷಣ ಪಡೆದಾಗ ಮಾತ್ರ ಶೋಷಣೆಯಿಂದ ಮುಕ್ತಿ ಪಡೆದು ಸಮಸ್ಯೆ ಎದುರಿಸುವ ಶಕ್ತಿ ಬರುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ತಿಳಿಸಿದರು.

ತಾಲ್ಲೂಕಿನ ತರದೇಕುಪ್ಪೆ ಗ್ರಾಮದಲ್ಲಿ ದಲಿತ ಹಕ್ಕುಗಳ ಸಮಿತಿಯ ಗ್ರಾಮ ಘಟಕ ಉದ್ಘಾಟಿಸಿ
ಅವರು ಮಾತನಾಡಿ
ದರು.

ದಲಿತರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಂಘಟನೆಗಳು ಶ್ರಮಿಸಬೇಕು. ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಸಕಾಲದಲ್ಲಿ ದಾಖಲೆ ಒದಗಿಸಿ ಸೌಲಭ್ಯ ಪಡೆದು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಕರೆ ನೀಡಿದರು.

ADVERTISEMENT

ತರೇದಕುಪ್ಪೆ ಸೈನಿಕ ಧನಂಜಯ್ಯ ಅಧ್ಯಕ್ಷತೆವಹಿಸಿದ್ದರು. ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ರಾಮನಗರ ಸಂಚಾಲಕಿ ವನಜಾ, ತಾಲ್ಲೂಕು ಸಂಚಾಲಕ ರಾಜು ವೆಂಕಟಪ್ಪ, ಪದಾಧಿಕಾರಿಗಳಾದ ಶ್ರೀನಿವಾಸ್, ಸ್ವಾಮಿ, ಶಿವಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಸದಸ್ಯ ಶಾನೇಗೌಡ, ಮಾಜಿ ಅಧ್ಯಕ್ಷ ನಾಗರಾಜು ಹಾಗೂ ಮುಖಂಡರು
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.