ಶಿರಾ: ಸರ್ಕಾರ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಹಲವು ಸವಲತ್ತುಗಳನ್ನು ಒದಗಿಸಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಿಸಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರು ರಾಜ್ಯದಲ್ಲಿ ಧ್ವನಿ ಇಲ್ಲದವರ, ಬಡವರ, ರೈತರ ಪರವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬಡವರ ಹಿತ ಕಾಪಾಡಿದ್ದಾರೆ. ವಿದ್ಯಾರ್ಥಿನಿಯರು ಸಾಧಕರನ್ನು ಮಾದರಿಯಾಗಿಟ್ಟುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಶಿರಾದಲ್ಲಿ ಶೀಘ್ರ ಅಲೆಮಾರಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವಣೇಕರ್, ನಗರಸಭೆ ಅಧ್ಯಕ್ಷ ಜೀಷನ್ ಮೊಹಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು ಬಿ.ಎಸ್., ನಗರಸಭೆ ಸದಸ್ಯೆ ಪೂಜಾ ಪೆದ್ದರಾಜು, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಡಿ.ವೈ.ಗೋಪಾಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.