ADVERTISEMENT

ಆದಾಯ ತೆರಿಗೆ ಇಲಾಖೆ ನೌಕರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 5:58 IST
Last Updated 14 ಫೆಬ್ರುವರಿ 2026, 5:58 IST
<div class="paragraphs"><p>ಸಾವು (ಸಾಂದರ್ಭಿಕ ಚಿತ್ರ)</p></div>

ಸಾವು (ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ತುಮಕೂರು: ನಗರದ ಅಮರಜ್ಯೋತಿ ನಗರದಲ್ಲಿ ಶುಕ್ರವಾರ ಆದಾಯ ತೆರಿಗೆ ಇಲಾಖೆ ನೌಕರ ಹಿಮಾಂಶು ಮಾಟಿಲ್ (29) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಹಿಮಾಂಶು ಉತ್ತರ ಪ್ರದೇಶದವರು. ಹಲವು ವರ್ಷಗಳಿಂದ ನಗರದಲ್ಲಿ ಕೆಲಸ ಮಾಡುತ್ತಿದ್ದರು. ಆದಾಯ ತೆರಿಗೆ ಇಲಾಖೆ ಕಚೇರಿ ಆವರಣದಲ್ಲಿರುವ ವಸತಿ ಗೃಹದಲ್ಲಿ ವಾಸವಿದ್ದರು. ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಆತ್ಮಹತ್ಯೆ: ತಾಲ್ಲೂಕಿನ ಸಂಕಲಾಪುರ ಗ್ರಾಮದ ಬಳಿ ಮಾವಿನ ಮರಕ್ಕೆ ನೇಣು ಹಾಕಿಕೊಂಡು ನಮಿತಾ ನಾಯ್ಕ್‌ (26) ಸಾವನ್ನಪ್ಪಿದ್ದಾರೆ.

ನಮಿತಾ ಒಡಿಶಾದವರು. ಪತಿ ಪ್ರಫುಲಾ ನಾಯ್ಕ್‌ ಜತೆಗೆ ಸಂಕಲಾಪುರದ ಹತ್ತಿರ ವಾಸವಿದ್ದರು. ಗಂಡ– ಹೆಂಡತಿ ಮಧ್ಯೆ ಮನಸ್ತಾಪ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.