ADVERTISEMENT

ಆಹಾರ ಧಾನ್ಯ ಶೇಖರಣೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ

ಮಕ್ಕಳ ಸಂರಕ್ಷಣೆ ಅರಿವು ಕಾರ್ಯಕ್ರಮದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 4:09 IST
Last Updated 2 ಸೆಪ್ಟೆಂಬರ್ 2021, 4:09 IST
ಚಿಕ್ಕನಾಯಕನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೈಜೆನಿಕ್ ಕಿಟ್‌ಗಳನ್ನು ಸಚಿವ ಜೆ.ಸಿ.ಮಾಧುಸ್ವಾಮಿ ವಿತರಿಸಿದರು
ಚಿಕ್ಕನಾಯಕನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೈಜೆನಿಕ್ ಕಿಟ್‌ಗಳನ್ನು ಸಚಿವ ಜೆ.ಸಿ.ಮಾಧುಸ್ವಾಮಿ ವಿತರಿಸಿದರು   

ಚಿಕ್ಕನಾಯಕನಹಳ್ಳಿ: ಆಹಾರ ಧಾನ್ಯ ಶೇಖರಣೆಯಲ್ಲಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನ ಪಡೆದಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಪಟ್ಟಣದ ತೀನಂಶ್ರೀ ಭವನದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ನಡೆದ ಮಕ್ಕಳ ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

70ರ ದಶಕದಲ್ಲಿ ದೇಶದಲ್ಲಿ ಆಹಾರ ಪದಾರ್ಥಗಳ ಮುಗ್ಗಟ್ಟು ಆಗಿದ್ದ ವೇಳೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಅಮೆರಿಕಾದಿಂದ ಜೋಳ ತರಿಸಿ ಜನರಿಗೆ ವಿತರಿಸಿದ್ದರು. ಸ್ವಾತಂತ್ರ್ಯ ಬಂದು 75 ವರ್ಷ ಸಂದಿದ್ದರೂ ಸಾಕಷ್ಟು ನಿರೀಕ್ಷೆಗಳು ಈಡೇರಲು ಸಾಧ್ಯವಾಗಿಲ್ಲ. ನಿರೀಕ್ಷೆಗಳು ಈಡೇರಲು ಆರ್ಥಿಕ ಸ್ಥಿತಿ ಮುಖ್ಯವಾಗುತ್ತದೆ. ಈ ದಿಸೆಯಲ್ಲಿ ಸರ್ಕಾರಗಳು ಲಭ್ಯತೆಯಿರುವ ಆರ್ಥಿಕತೆಗೆ ಅನುಗುಣವಾಗಿ ನೀಡುತ್ತಿವೆ ಎಂದರು.

ADVERTISEMENT

ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ₹10 ಸಾವಿರ ಸಹಾಯಧನದ ಚೆಕ್‌ ಅನ್ನು ಸಚಿವರು ವಿತರಿಸಿದರು. ಬೆಂಗಳೂರಿನ ಸೇವ್ ಚಿಲ್ಡ್ರನ್ ಸಂಸ್ಥೆಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹೈಜೆನಿಕ್ ಕಿಟ್ ವಿತರಿಸಲಾಯಿತು.

ಜಿಲ್ಲಾ ಶಿಶು ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ಶಶಿಧರ್, ತಹಶೀಲ್ದಾರ್ ಬಿ.ತೇಜಸ್ವಿನಿ, ತಾಲ್ಲೂಕು ಪಂಚಾಯಿತಿ ಇಒ ವಸಂತ್‌ಕುಮಾರ್, ಪುರಸಭಾ ಅಧ್ಯಕ್ಷೆ ಪುಷ್ಟಾವತಿ, ಸದಸ್ಯೆ ಪೂರ್ಣಿಮಾ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊನ್ನಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.