ADVERTISEMENT

ಚಿಕ್ಕನಾಯಕನಹಳ್ಳಿ: ನೇರ ವೇತನಕ್ಕೆ ಒತ್ತಾಯ

ಪುರಸಭೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 8:48 IST
Last Updated 1 ಅಕ್ಟೋಬರ್ 2020, 8:48 IST
ಚಿಕ್ಕನಾಯಕನಹಳ್ಳಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪುರಸಭೆಯ ಹೊರುಗತ್ತಿಗೆ ವಾಹನ ಚಾಲಕರು ಹಾಗೂ ವಾಟರ್ ಮೆನ್ ಗಳಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಪುರಸಭೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಚಿಕ್ಕನಾಯಕನಹಳ್ಳಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪುರಸಭೆಯ ಹೊರುಗತ್ತಿಗೆ ವಾಹನ ಚಾಲಕರು ಹಾಗೂ ವಾಟರ್ ಮೆನ್ ಗಳಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಪುರಸಭೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.   

ಚಿಕ್ಕನಾಯಕನಹಳ್ಳಿ: ಪುರಸಭೆ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್‌ಮನ್‌ಗಳಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೆ ಆಗ್ರಹಿಸಿ ಪುರಸಭೆ ಹೊರಗುತ್ತಿಗೆ ನೌಕರರು ಪಟ್ಟಣದ ಪುರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.

ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಪಾಲಿಕೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಹಾಗೂ ವಾಟರ್‌ಮನ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದು ನೌಕರರಿಗೆ ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ನೇರ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಪುರಸಭಾ ಮುಖ್ಯಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರಗಳ ಸ್ವಚ್ಛತೆ ನಿರ್ವಹಣೆಯಲ್ಲಿ ತ್ಯಾಜ್ಯ ಸಾಗಾಣಿಕೆಯ ಚಾಲಕರ ಪಾತ್ರ ದೊಡ್ಡದಾಗಿದ್ದು ಪೌರ ಕಾರ್ಮಿಕರ ಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೆ ವಾಟರ್‌ಮನ್‌ಗಳು ಸಹ ಯಾವುದೇ ಸೇವಾ ಭದ್ರತೆಯಿಲ್ಲದೆ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

ADVERTISEMENT

ಪ್ರತಿಭಟನೆಯಲ್ಲಿ ಡಿಎಸ್ಎಸ್ ಮುಖಂಡ ಲಿಂಗದೇವರು ಮಾತನಾಡಿ, ‘ಪಟ್ಟಣದ ಪುರಸಭೆಯಲ್ಲಿ 22 ವರ್ಷಗಳಿಂದ ವಾಟರ್‌ಮನ್ ಆಗಿ ಕಸ ವಿಲೇವಾರಿ ಮಾಡುವ ಚಾಲಕರಾಗಿ 25ಕ್ಕೂ ನೌಕರರು ಕೆಲಸ ಮಾಡುತ್ತಿದ್ದು, ಈ ನೌಕರರು ಇಷ್ಟು ವರ್ಷ ಸರ್ಕಾರದ ಯಾವುದೇ ಸೌಲಭ್ಯ ಪಡೆಯದೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸರಿಯಾಗಿ ಸಂಬಳ ಕೊಡದೆ ಇಎಸ್ಐ, ಪಿಎಪ್ ಯಾವುದೇ ಸೌಲಭ್ಯವಿಲ್ಲ’ ಎಂದರು.

ಮುಖಂಡರಾದ ಸಿ.ಡಿ.ಚಂದ್ರಶೇಖರ್, ಇಟ್ಟಿಗೆ ರಂಗಸ್ವಾಮಯ್ಯ, ಮಲ್ಲಿಕಾರ್ಜುನ್, ನಾರಾಯಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.