ADVERTISEMENT

ತುಮಕೂರು: ಸಾಗುವಳಿಗೆ ಅಡ್ಡಿಪಡಿಸದಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 5:46 IST
Last Updated 28 ಮಾರ್ಚ್ 2023, 5:46 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಸಾಗುವಳಿಗೆ ಅಡ್ಡಿಪಡಿಸದಂತೆ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ವ್ಯಾಪ್ತಿಯ ರೈತರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಸಾಗುವಳಿಗೆ ಅಡ್ಡಿಪಡಿಸದಂತೆ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ವ್ಯಾಪ್ತಿಯ ರೈತರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು   

ತುಮಕೂರು: ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿರುವ ಅರ್ಜಿಗಳು ಇತ್ಯರ್ಥ ಆಗುವವರೆಗೂ ಸಾಗುವಳಿಗೆ ಅಡ್ಡಿಪಡಿಸದಂತೆ ರೈತರು ಒತ್ತಾಯಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಗುಬ್ಬಿ ತಾಲ್ಲೂಕು ಮಂಚಲದೊರೆ, ಅಂಕಸಂದ್ರ ಗ್ರಾ.ಪಂ ಒಳಗೊಂಡಂತೆ ಸುಮಾರು 35 ಗ್ರಾಮಗಳ ಎರಡು ಸಾವಿರಕ್ಕೂ ಹೆಚ್ಚಿನ ಸಾಗುವಳಿದಾರರು ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವುಗಳ ವಿಲೇವಾರಿ ಮಾಡದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಚನ್ನಬಸವಣ್ಣ ದೂರಿದರು.

ADVERTISEMENT

ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ವ್ಯಾಪ್ತಿಯಲ್ಲಿ ಹಲವು ದಶಕಗಳಿಂದ ಸಾಗುವಳಿಯಲ್ಲಿ ತೊಡಗಿದ ರೈತರು ಫಾರಂ 50, 51, 53, 57 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈಗ ಅರಣ್ಯ ಇಲಾಖೆಯ ಮೂಲಕ ರೈತರ ಸಾಗುವಳಿ ಜಮೀನುಗಳನ್ನು ಬಲವಂತವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ರಾಜಮ್ಮ, ಮುಖಂಡ ನಾಗರಾಜು ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್‌.ಕೆ. ಸುಬ್ರಮಣ್ಯ, ರೈತರಾದ ನರಸಿಂಹಮೂರ್ತಿ, ಪವಿತ್ರಾ, ಅಚ್ಚಲಪ್ಪ, ಕೋದಂಡಪ್ಪ, ಲೋಕೇಶ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.